newsfirstkannada.com

ದೇಶದಲ್ಲಿ ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ.. ಯಾವುದು ಏನಾಗಿದೆ..?

Share :

Published July 1, 2024 at 7:05am

    ದೇಶದಾದ್ಯಂತ ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನು

    3 ಹೊಸ ಕಾಯ್ದೆಗೆ ಕಳೆದ ವರ್ಷ ಸಂಸತ್​ನಲ್ಲಿ ಅನುಮೋದನೆ

    ಡಿಸೆಂಬರ್ 25 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್​​ಪಿಸಿ (Criminal Procedure Code) ಹಾಗೂ ಇಂಡಿಯನ್​ ಎವಿಡೆನ್ಸ್​ ಆ್ಯಕ್ಟ್​​ಗೆ ಬದಲಿಗೆ ಹೊಸ ಕಾನೂನು ಜಾರಿಗೆ ಬರುತ್ತಿವೆ.

ನೂತನ ಕಾನೂನು

  • ಭಾರತೀಯ ನ್ಯಾಯ ಸಂಹಿತೆ (BNS: Bharatiya Nyaya Sanhita)
  • ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS:  Bharatiya Nagarik Suraksha Sanhita)
  • ಭಾರತೀಯ ಸಾಕ್ಷ್ಯ ಕಾಯ್ದೆ (BSA: Bharatiya Sakshya Adhiniyam)

ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ 1860ರಲ್ಲಿ ಜಾರಿ ಮಾಡಿದ್ದ ಐಪಿಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಎಂದು, 1898ರಲ್ಲಿ ಜಾರಿಗೆ ಬಂದಿದ್ದ CrPC ಬದಲಿಗೆ ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಎಂದು ಹಾಗೂ 1872ರಲ್ಲಿ ಬಂದಿದ್ದ ಇಂಡಿಯನ್ ಎವಿಡೆನ್ಸ್​ ಆ್ಯಕ್ಟ್​​ ಬದಲಾಗಿ ಭಾರತೀಯ ಸಾಕ್ಷ್ಯ ಕಾಯ್ದೆ ಎಂದು ಮಾಡಲಾಗಿದೆ. ಈ ಮೂರು ಹೊಸ ಕಾಯ್ದೆಗೆ ಕಳೆದ ವರ್ಷ ಸಂಸತ್​​ನಲ್ಲಿ ಅನುಮೋದನೆ ದೊರೆತಿತ್ತು. ಡಿಸೆಂಬರ್ 25 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ. ಹಿಟ್ ಆ್ಯಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳನ್ನು ಮಾತ್ರ ಸದ್ಯಕ್ಕೆ ಜಾರಿಗೊಳಿಸದೆ ಇರಲು ಸರ್ಕಾರ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ:‘ಆಟದ ನಂತರ ನಾನು ಅಳುವುದಿಲ್ಲ, ಆದರೆ ಇವತ್ತು..’ ಬೂಮ್ರಾ ಹೇಳಿದ್ದೇನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೇಶದಲ್ಲಿ ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ.. ಯಾವುದು ಏನಾಗಿದೆ..?

https://newsfirstlive.com/wp-content/uploads/2024/07/LAW.jpg

Load More