ಬೈಯಪ್ಪನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ವಿಕಾಸ್ಗೆ ಎಚ್ಚರಿಕೆ ಕೊಟ್ಟಿದ್ದೇಕೆ?
ಆ ಒಂದು ರೀಲ್ಸ್ ಶೇರ್ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಕ್ಕಿಪೀಡಿಯಾ
‘ನಾನು ನಂದಿನಿ’ ಸ್ಪೆಷಲ್ ಸಾಂಗ್ ಕಂಪೋಸ್ ಮಾಡಿ ಫೇಮಸ್ ಆಗಿದ್ದ ವಿಕಾಸ್
ಸೋಶಿಯಲ್ ಮೀಡಿಯಾದಲ್ಲಿ ಹೊಸ ಹೊಸ ವಿಡಿಯೋವನ್ನು ಶೇರ್ ಮಾಡಿಕೊಂಡು ನೆಟ್ಟಿಗರಿಗೆ ಮನರಂಜನೆ ನೀಡುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ.
ಇದನ್ನೂ ಓದಿ: ‘ನಾನು ನಂದಿನಿ..’ ಫುಲ್ ಟ್ರೆಂಡಿಂಗ್.. ದಾಖಲೆ ಬರೆದ ಈ ಸಾಂಗ್ ಕಂಪೋಸ್ ಮಾಡಿದ್ಯಾರು..?
ಹೌದು, ಭಿನ್ನ ವಿಭಿನ್ನ ರೀಲ್ಸ್ಗಳನ್ನು ಶೇರ್ ಮಾಡಿ ಸಖತ್ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ಗೆ ಪೊಲೀಸರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ವೊಂದನ್ನು ಶೇರ್ ಮಾಡಿಕೊಂಡಿದ್ದರು. ಇದೇ ರೀಲ್ಸ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಕ್ಕಿಪೀಡಿಯಾ ವಿಕಾಸ್ ಡ್ರಗ್ಸ್ (ಮಾದಕ ವಸ್ತು ವ್ಯಸನ) ವಿಚಾರಕ್ಕೆ ಸಂಬಂಧಿಸಿದಂತ ರೀಲ್ಸ್ವೊಂದನ್ನು ಶೇರ್ ಮಾಡಿಕೊಂಡಿದ್ದರು.
ಇದೇ ವಿಚಾರಕ್ಕೆ ವಿಕ್ಕಿಪೀಡಿಯಾ ವಿಕಾಸ್ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವಿಕ್ಕಿಪೀಡಿಯಾ ವಿಕಾಸ್ ಅವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರಂತೆ. ನಾನು ನಂದಿನಿ ಬೆಂಗಳೂರಿಗೆ ಬಂದೀನಿ ಸಾಂಗ್ ಮೂಲಕ ಫೇಮಸ್ ಆಗಿದ್ದರು ವಿಕಾಸ್. ವಿಭಿನ್ನ ಶೈಲಿಯಲ್ಲಿ ಕಂಟೆಂಟ್ ಕ್ರಿಯೇಟ್ ಮಾಡಿ ರೀಲ್ಸ್ ಮಾಡುತ್ತಿದ್ದರು. ವಿಕಾಸ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಅನ್ನು ಹೊಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ