ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿದ ರೋಹಿತ್ ಶರ್ಮಾ
ಸದ್ಯ ಭಾರತ ತಂಡದಲ್ಲಿ ಟಿ20 ಕ್ಯಾಪ್ಟನ್ ಆಗಲು ಭಾರೀ ಪೈಪೋಟಿ..!
ಕ್ಯಾಪ್ಟನ್ ಆಗಲು ಬಯಸಿದ್ದ ಹಾರ್ದಿಕ್ ಪಾಂಡ್ಯ ಶಾಕ್ ಕೊಟ್ಟ ಕೋಚ್
ಇತ್ತೀಚೆಗೆ ಜಿಂಬಾಬ್ವೆ ಕ್ರಿಕೆಟ್ ತಂಡದ ವಿರುದ್ಧ ನಡೆದ ಟಿ20 ಸರಣಿಯಲ್ಲಿ 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಟಿ20 ವಿಶ್ವಕಪ್ ಚಾಂಪಿಯನ್ ತಂಡ ಟೀಮ್ ಇಂಡಿಯಾ ಮತ್ತೊಂದು ಸರಣಿಯನ್ನು ಗೆದ್ದಿದೆ. ಈ ಬೆನ್ನಲ್ಲೇ ಶ್ರೀಲಂಕಾ ವಿರುದ್ಧ ಜೂನ್ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಇದಕ್ಕಾಗಿ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಬೇಕಿದೆ.
🚨🔴 Gautam Gambhir has made it clear that he wants Suryakumar Yadav as the new T20I captain. pic.twitter.com/asT6aV7lx6
— Vishal. (@SPORTYVISHAL) July 16, 2024
ರಾಹುಲ್ ದ್ರಾವಿಡ್ ನಿರ್ಗಮನದ ನಂತರ ಈಗಾಗಲೇ ಬಿಸಿಸಿಐ ಟೀಮ್ ಇಂಡಿಯಾಗೆ ಹೊಸ ಮುಖ್ಯ ಕೋಚ್ ಆಯ್ಕೆ ಮಾಡಿದೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಆಗಿದ್ದಾರೆ. ವಿಶ್ವಕಪ್ ಗೆದ್ದ ಕೂಡಲೇ ಕ್ಯಾಪ್ಟನ್ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಹಾಗಾಗಿ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಹೊಸ ಕ್ಯಾಪ್ಟನ್ ಬೇಕಿದೆ. ಭಾರತ ಟಿ20 ಕ್ರಿಕೆಟ್ ತಂಡದ ಕ್ಯಾಪ್ಟನ್ ರೇಸ್ನಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬಂದಿತ್ತು. ಈಗ ಕ್ಯಾಪ್ಟನ್ ಆಗೋ ಕನಸು ಕಂಡಿದ್ದ ಹಾರ್ದಿಕ್ ಪಾಂಡ್ಯಗೆ ಕೋಚ್ ಗೌತಮ್ ಗಂಭೀರ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಕೋಚ್ ಗೌತಮ್ ಗಂಭೀರ್ ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಲಿ ಎಂದು ಸೆಲೆಕ್ಷನ್ ಕಮಿಟಿ ಮುಂದೆ ಪ್ರಪೋಸಲ್ ಇಟ್ಟಿದ್ದಾರಂತೆ. ಯಾವುದೇ ಕಾರಣಕ್ಕೂ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಆಗೋದು ಬೇಡ. ಇವರ ಬದಲಿಗೆ ಸೂರ್ಯ ಭಾರತ ತಂಡವನ್ನು ಮುನ್ನಡೆಸಲಿ ಎಂದು ಗಂಭೀರ್ ಖಡಕ್ ಆಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ಕೊಟ್ಟ ಲಕ್ನೋ ತಂಡ.. ಅಸಲಿಗೆ ಆಗಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್