newsfirstkannada.com

×

ಮನೆ ಕುಸಿದು ಮುದ್ದಾದ ಅವಳಿ ಮಕ್ಕಳು ಸೇರಿ 3 ಸಾವು.. ಪಾಪ.. ಆಂಬ್ಯುಲೆನ್ಸ್​ ಬೇಗ ಬಂದಿದ್ರೆ ಬದುಕುತ್ತಿದ್ದರೇನೋ..

Share :

Published July 19, 2024 at 11:55am

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವೃದ್ಧೆ ಸ್ಥಿತಿ ಚಿಂತಾಜನಕ

    ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

    ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲು ಈಗಾಗ್ಲೇ ವ್ಯವಸ್ಥೆ

ಹಾವೇರಿ: ಸವಣೂರಿನ ಮಾದಾಪುರ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ಸವಣೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ನಿರಂತರ ಮಳೆಗೆ ಮನೆ ಕುಸಿದು ಅವಳಿ ಮಕ್ಕಳು, ಓರ್ವ ಮಹಿಳೆ ಸಾವು.. ಮೂವರು ಗಂಭೀರ

ಹಾವೇರಿಯ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ಸವಣೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಲ್ಲವ್ವ, ಮುತ್ತು ಹರಕೂನಿ ಹಾಗೂ ಅವರ ಪತ್ನಿ ಸುನಿತಾ ಅವರ ಆರೋಗ್ಯವನ್ನು ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ಗುಡ್​​ನ್ಯೂಸ್.. ಕೆಆರ್​​ಎಸ್​ ಡ್ಯಾಂ ತುಂಬಲು ಕೆಲವೇ ಅಡಿಗಳು ಮಾತ್ರ ಬಾಕಿ..

ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ (ಮಧ್ಯದಲ್ಲಿ ಕೈಕಟ್ಟಿ ನಿಂತವರು)

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ.. ನಸುಕಿನ ವೇಳೆಯಲ್ಲಿ ಈ‌ ಅವಘಡ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದಿದ್ದರಿಂದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಿಂದ ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದೆ. ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ವಯೋವೃದ್ಧೆಯ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಅವರಿಗೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲು ಈಗಾಗಲೇ ವ್ಯವಸ್ಥೆ ಮಾಡಲಾಗುತ್ತಿದೆ. ಎನ್​ಡಿ‌ಆರ್​ಎಫ್ ನಾರ್ಮ್ ಪ್ರಕಾರ ಮೃತರ ಕುಟುಂಬಗಳಿಗೆ ತ್ವರಿತವಾಗಿ ಪರಿಹಾರ ನೀಡಲಾಗುವುದು. ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್ ತಡವಾಗಿ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮನೆ ಕುಸಿದು ಮುದ್ದಾದ ಅವಳಿ ಮಕ್ಕಳು ಸೇರಿ 3 ಸಾವು.. ಪಾಪ.. ಆಂಬ್ಯುಲೆನ್ಸ್​ ಬೇಗ ಬಂದಿದ್ರೆ ಬದುಕುತ್ತಿದ್ದರೇನೋ..

https://newsfirstlive.com/wp-content/uploads/2024/07/HVR_3_DEAD_RAIN.jpg

Load More