ಶ್ರೀಲಂಕಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾದಲ್ಲಿ ಸಿಕ್ಕಿಲ್ಲ ಅವಕಾಶ..!
ಟೀಮ್ ಇಂಡಿಯಾ ಯುವ ಬ್ಯಾಟರ್ ಅಭಿಷೇಕ್ ಶರ್ಮಾಗೆ ನೋ ಚಾನ್ಸ್
ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ ಭಾರತ ತಂಡದ ಅಭಿಮಾನಿಗಳು
ಟೀಮ್ ಇಂಡಿಯಾ, ಶ್ರೀಲಂಕಾ ನಡುವಿನ ಟಿ20 ಮತ್ತು ಏಕದಿನ ಸರಣಿ ಜೂನ್ 27ನೇ ತಾರೀಕಿನಿಂದ ಶುರುವಾಗಲಿದೆ. ಶ್ರೀಲಂಕಾ ಪ್ರವಾಸಕ್ಕೆ ಈಗಾಗಲೇ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಆಗಿದೆ. ಬಹಳ ದಿನಗಳ ಬಳಿಕ ಹಲವು ಸ್ಟಾರ್ ಕ್ರಿಕೆಟರ್ಸ್ ಟೀಮ್ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದು, ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಅವರಿಗೆ ಮಾತ್ರ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸೋಷಿಯಲ್ ಮೀಡಿಯಾದಲ್ಲಿ ಬಿಸಿಸಿಐ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಯಾರು ಈ ಅಭಿಷೇಕ್ ಶರ್ಮಾ?
ಅಭಿಶೇಕ್ ಶರ್ಮಾ ಮೂಲತಃ ಪಂಜಾಬ್. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಾರೆ. ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಓಪನರ್ ಆಗಿ ಬರುತ್ತಿದ್ದ ಅಭಿಶೇಕ್ ಅಬ್ಬರದ ಬ್ಯಾಟಿಂಗ್ ಮಾಡುತ್ತಿದ್ರು. ಇವರನ್ನು ಜಿಂಬಾಬ್ವೆ ವಿರುದ್ಧದ 5 ಟಿ20 ಪಂದ್ಯಗಳ ಟೂರ್ನಿಗೆ ಆಯ್ಕೆ ಮಾಡಲಾಗಿತ್ತು.
ಜಿಂಬಾಬ್ವೆ ವಿರುದ್ಧ ಸಿಡಿದ ಯುವ ಬ್ಯಾಟರ್..!
ಚೊಚ್ಚಲ ಪಂದ್ಯದಲ್ಲೇ ನಾಲ್ಕು ಎಸೆತಗಳಲ್ಲಿ ಅಭಿಷೇಕ್ ಶೂನ್ಯಕ್ಕೆ ಔಟಾದ್ರೂ ಬಳಿಕ ಭರ್ಜರಿ ಕಮ್ಬ್ಯಾಕ್ ಮಾಡಿದ್ರು. ಹರಾರೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಕ್ರಿಕೆಟರ್ ಅಭಿಶೇಕ್ ಶರ್ಮಾ ಶತಕ ಬಾರಿಸಿದ್ರು. ಟೀಮ್ ಇಂಡಿಯಾಗೆ ಡೆಬ್ಯೂಟ್ ಮಾಡಿದ 2ನೇ ಪಂದ್ಯದಲ್ಲೇ ಸಿಡಿಲಬ್ಬರದ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಇನ್ನಿಂಗ್ಸ್ ಉದ್ಧಕ್ಕೂ ಜಿಂಬಾಬ್ವೆ ಕ್ರಿಕೆಟ್ ತಂಡದ ಬೌಲರ್ಗಳ ಬೆಂಡೆತ್ತಿದ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿದ್ರು. ತಾನು ಎದುರಿಸಿದ ಕೇವಲ 47 ಬಾಲ್ನಲ್ಲಿ ಬರೋಬ್ಬರಿ 8 ಸಿಕ್ಸರ್, 7 ಫೋರ್ ಜತೆಗೆ 100 ರನ್ ಚಚ್ಚಿದ್ರು.
ಇದನ್ನೂ ಓದಿ: ಇಶಾನ್ ಕಿಶನ್ ಕ್ರಿಕೆಟ್ ಕರಿಯರ್ ಮುಗೀತಾ? ಖಡಕ್ ವಾರ್ನಿಂಗ್ ಬಿಸಿಸಿಐ! ಏನದು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ