newsfirstkannada.com

ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು.. ಚಾಲಕನ ಪರಿಸ್ಥಿತಿ?

Share :

Published July 20, 2024 at 7:12am

    ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಿಯಾ ಕಾರು

    ಚಾಲಕ ಒಬ್ಬನೇ ಪ್ರಯಾಣ ಮಾಡುವಾಗ ಅವಘಡ

    ಕಾರು ಹೊತ್ತಿ ಉರಿಯುತ್ತಿರೋದನ್ನು ಕಂಡ ಸ್ಥಳೀಯರು

ಬೆಂಗಳೂರು: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ರಾತ್ರಿ 10.20ರ ಸುಮಾರಿಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಮೇಕಪ್​​ ಮಾಡೋ ಹೆಣ್ಣುಮಕ್ಕಳೇ ಹುಷಾರ್​​.. ಸಿಕ್ಕಸಿಕ್ಕಲ್ಲಿ ಬ್ಯೂಟಿ ಪ್ರಾಡಕ್ಟ್​​ ಖರೀದಿಸೋ ಮುನ್ನ ಎಚ್ಚರ!

ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಳೆ, ಪ್ರವಾಹ, ಸಂಕಷ್ಟ.. ಶಾಲಾ-ಕಾಲೇಜುಗಳಿಗೆ ರಜೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಕಾರು ಹೊತ್ತಿ ಉರಿಯುತ್ತಿರೋದನ್ನು ಕಂಡು ಸ್ಥಳೀಯರು ಆಗ್ನಿಶಾಮಕ ದಳಕ್ಕೆ‌ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು.. ಚಾಲಕನ ಪರಿಸ್ಥಿತಿ?

https://newsfirstlive.com/wp-content/uploads/2024/07/Kia-Car.jpg

Load More