newsfirstkannada.com

ಗುರಾಯಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಯುವಕನ ಬರ್ಬರ ಹತ್ಯೆ.. ಅಸಲಿಗೆ ಆಗಿದ್ದೇನು?

Share :

Published July 21, 2024 at 11:19am

Update July 21, 2024 at 11:36am

    ರಸ್ತೆಯಲ್ಲಿ ನಡೆದು ಹೋಗುವಾಗ ಯುವಕನನ್ನ ಗುರಾಯಿದ್ದನು

    ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಂದು ಬಿಟ್ರಾ?

    ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ತುಂಗಾಭದ್ರ ಡ್ಯಾಂ ಭರ್ತಿಗೆ ಕೆಲವೇ ಅಡಿಗಳು ಬಾಕಿ.. 3 ವಾರದಲ್ಲಿ ಹರಿದು ಬಂದಿರೋ ನೀರು ಎಷ್ಟು?

ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ಯುವಕ. ಹೊಯ್ಸಳ ನಗರ 3ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಯುವಕ ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ‌ ವ್ಯಕ್ತಿ, ಯುವಕನನ್ನು ಗುರಾಯಿಸಿಕೊಂಡು ಹೋಗುತ್ತಿದ್ದನು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯೇ ಆಗಿದೆ.

ಇದನ್ನೂ ಓದಿ: ಕನ್ವರ್ ಯಾತ್ರೆಗೆ ಯೋಗಿ ಸರ್ಕಾರದ ರೂಲ್ಸ್​ ಏನು..? ಬಿಟೌನ್ ಬ್ಯೂಟಿ ಕಂಗನಾ- ಸೋನ್ ಸೂದ್ ಮಧ್ಯ ವಾರ್

ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗಿದ್ದರಿಂದ ಯುವಕನ ಮೇಲೆ ವ್ಯಕ್ತಿ ಮಾರಣಾಂತಿಕ ಹಲ್ಲೆ ಮಾಡಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಸ್ನೇಹಿತರು ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೆ ಮನೋಜ್ ಸಾವನ್ನಪ್ಪಿದ್ದಾನೆ. ಇನ್ನು ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗುರಾಯಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಯುವಕನ ಬರ್ಬರ ಹತ್ಯೆ.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/07/BNG_MURDER-2.jpg

Load More