newsfirstkannada.com

×

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Share :

Published July 29, 2024 at 8:37pm

    ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 40ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

    ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೆಲಡಕು ಗ್ರಾಮದಲ್ಲಿ ಘಟನೆ

    ಮಧ್ಯಾಹ್ನ ಬಿಸಿ ಊಟ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರು?

ವಿಜಯನಗರ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಬಡೆಲಡಕು ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಕಂಡು ಬಂದಿದ್ದು ಈ ಘಟನೆಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ದರ್ಶನ್‌ಗೆ ದೇವರ ಪ್ರಸಾದ ಕೊಟ್ಟು ಧೈರ್ಯ ತುಂಬಿದ ವಿಜಯಲಕ್ಷ್ಮಿ; ಮನೆ ಊಟದ ಅರ್ಜಿ ವಾಪಸ್; ಕಾರಣವೇನು?

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದ ಆಹಾರವನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಊಟದ ಬಳಿಕ 20ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಆಹಾರದಲ್ಲಿ ಎರಡರಿಂದ ಮೂರು ಹಲ್ಲಿಗಳು ಬಿದ್ದಿದ್ದವು ಅಂತ ಸ್ಥಳೀಯರು ಆರೋಪಿಸಿದ್ದಾರೆ. ಹಲ್ಲಿ ಇರೋದು ಗೊತ್ತಾದ ಹಿನ್ನೆಲೆ ಕೂಡಲೇ ಪೋಷಕರು ತಮ್ಮ ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ತಪಾಸಣೆ ಮಾಡಿಸಿದ್ದಾರೆ.

ಅಸ್ವಸ್ಥಗೊಂಡ ಎಲ್ಲಾ ಮಕ್ಕಳು ಕೂಡ್ಲಿಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ಟಿ ಶ್ರೀನಿವಾಸ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/07/DARSHAN-11.jpg

Load More