newsfirstkannada.com

ಕ್ಷುಲ್ಲಕ ಕಾರಣಕ್ಕೆ ಪೊಲೀಸರಿಂದ ಹಲ್ಲೆ; ಯುವಕನ ಸ್ಥಿತಿ ಗಂಭೀರ; ಸ್ಥಳೀಯರಿಂದ ಭಾರೀ ಆಕ್ರೋಶ

Share :

Published August 1, 2024 at 9:31pm

    ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

    ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿ ಓಡಿದ್ದು ಯಾಕೆ?

    ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಯುವಕನೊರ್ವನ ಮೇಲೆ ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಗೋಳಗುಮ್ಮಟ ಎದುರು ಈ ಘಟನೆ ನಡೆದಿದೆ.

ಇದನ್ನೂ ಓದಿ: ಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು.. ಚಾರುಹಾಸನ್​ಗೆ ಏನಾಯಿತು..?

ಯುವಕ ಸಂತೋಷ್​ ಗುಣಸಿ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋಳಗುಮ್ಮಟ ಎದುರು ಇಬ್ಬರು ಯುವಕರ ಮಧ್ಯೆ ವಾಗ್ವಾದ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ ಪೊಲೀಸರು ಯುವಕರ ಮೇಲೆ ಹಲ್ಲೆ ಮಾಡಿ ಸ್ಥಳದಿಂದ ಹೋಗಿದ್ದಾರೆ. ಆದರೆ ಘಟನೆಯಲ್ಲಿ ಸಂತೋಷ್ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಿತಿ ಗಂಭೀರವಾಗಿದ್ದು ಸಂತೋಷ್​ನನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ₹1200 ಕೋಟಿ ವೆಚ್ಚದ ಸಂಸತ್ ಭವನ ಸೋರಿಕೆ.. ₹120 ಬಕೆಟ್​ ಮೇಲೆ ಅವಲಂಬಿತ ಆಯ್ತಾವೆಂದು ವ್ಯಂಗ್ಯ

ಸದ್ಯ ಈ ಸಂಬಂಧ ಸ್ಥಳೀಯರು, ಕುಟುಂಬಸ್ಥರು ರಸ್ತೆ ಬಂದ್ ಮಾಡಿ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೂರಾರು ಯುವಕರು ಟೈರ್​ಗೆ ಬೆಂಕಿ ಹಚ್ಚಿ ನ್ಯಾಯ ಕೇಳುತ್ತಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿರುವ ಸ್ಥಳೀಯರು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕ್ಷುಲ್ಲಕ ಕಾರಣಕ್ಕೆ ಪೊಲೀಸರಿಂದ ಹಲ್ಲೆ; ಯುವಕನ ಸ್ಥಿತಿ ಗಂಭೀರ; ಸ್ಥಳೀಯರಿಂದ ಭಾರೀ ಆಕ್ರೋಶ

https://newsfirstlive.com/wp-content/uploads/2024/08/VIJ_POLICE_1.jpg

Load More