ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಘೋಷಣೆ ಮಾಡಿದ್ದಾರೆ
ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿಯ ಫೈನಲ್ನಲ್ಲಿ ಅನರ್ಹ
ವಿನೇಶ್ ಫೋಗಟ್ ಬಗ್ಗೆ ಕಂಗನಾ ರಣಾವತ್ ಹೇಳಿದ್ದೇನು?
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿಯಲ್ಲಿ ವಿನೇಶ್ ಫೋಗಟ್ ಫೈನಲ್ ಪ್ರವೇಶ ಮಾಡಿ ಅನರ್ಹಗೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕೋಟ್ಯಂತರ ಭಾರತೀಯರ ಹೃದಯ ಛಿದ್ರಛಿದ್ರಗೊಂಡಿದೆ.
ಇದೇ ನೋವಿನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯವನ್ನೂ ಹೇಳಿದ್ದಾರೆ. ಕುಗ್ಗಿ ಹೋಗಿರುವ ವಿನೇಶ್ಗೆ ಧೈರ್ಯ ತುಂಬುವ ಕೆಲಸ ಕೂಡ ನಡೆಯುತ್ತಿದೆ. ಅಂತೆಯೇ ಬಿಜೆಪಿ ಸಂಸದೆ ಕಂಗನಾ ರಣಾವತ್ ಇನ್ಸ್ಟಾ ಸ್ಟೋರಿಯಲ್ಲಿ ವಿನೇಶ್ ಫೋಗಟ್ ಬಗ್ಗೆ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ವಿನೇಶ್ ಫೋಗಟ್ ಗೆಲುವಿನ ಬಗ್ಗೆ ಕಂಗನಾ ರಣಾವತ್ ವ್ಯಂಗ್ಯ; ರೊಚ್ಚಿಗೆದ್ದ ಜನ..!
ಒಂದು ಪೋಸ್ಟ್ನಲ್ಲಿ ಕಾರ್ಟೂನ್ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅಳಬೇಡ ವಿನೇಶ್, ಇಡೀ ದೇಶವೇ ನಿನ್ನೊಂದಿಗೆ ನಿಂತಿದೆ’ ಎಂಬ ಸಂದೇಶ ಇದೆ. ಇನ್ನೊಂದು ಫೋಟೋದಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿಟಿ ಉಷಾ, ವಿನೇಶ್ ಭೇಟಿಯಾದ ಕ್ಷಣದ್ದಾಗಿದೆ. ಅದರ ಮೇಲೆ ನೀವು ‘ಸಿಂಹಿಣಿ’ ಎಂದು ಬರೆದಿದ್ದಾರೆ. ವಿನೇಶ್ ಫೋಗಟ್ ಅವರನ್ನು ಕಂಗನಾ ಸಿಂಹಿಣಿ ಅಂದಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ಯಾಕೆಂದರೆ ವಿನೇಶ್ ಫೋಗಟ್ ಫೈನಲ್ ಪ್ರವೇಶ ಮಾಡ್ತಿದ್ದಂತೆಯೇ, ಅವರನ್ನು ಹಂಗಿಸಿ ಕಂಗನಾ ಪೋಸ್ಟ್ ಮಾಡಿದ್ದರು.
ಹಿಂದಿನ ಪೋಸ್ಟ್ನಲ್ಲಿ ಏನಿತ್ತು..?
ವಿನೇಶ್ ಫೋಗಟ್ ಫೈನಲ್ ಪ್ರವೇಶದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಸಂಸದೆ ಕಂಗನಾ ರಣಾವತ್, ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾವಹಿಸಿದ್ದರು. ಈ ವೇಳೆ ಅವರು ಮೋದಿ ನಿಮ್ಮ ಸಮಾಧಿಯನ್ನೂ ಅಗೆಯುತ್ತಾರೆ ಎಂದು ಹೇಳಿದ್ದರು. ಅದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿತು. ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ ಎಂದು ಬೆರೆದುಕೊಂಡಿದ್ದರು.
ಇದನ್ನೂ ಓದಿ:Big Updates: ಸುನಿತಾ ವಿಲಿಯಮ್ಸ್ಗೆ ಮತ್ತೊಂದು ಸಂಕಷ್ಟ.. ಮತ್ತೆ ಏನಾಯ್ತು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ