newsfirstkannada.com

ಪಲ್ಟಿಯಾದ ಸಾರಿಗೆ ಬಸ್.. 13ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ, ಇಬ್ಬರ ಸ್ಥಿತಿ ಚಿಂತಾಜನಕ

Share :

Published August 12, 2024 at 1:38pm

    ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಸಾರಿಗೆ ಬಸ್

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ

    ಘಟನೆಯಲ್ಲಿ ಗಾಯಗೊಂಡವರು ಜಿಲ್ಲಾಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶ ರಾಜ್ಯದ ಸಾರಿಗೆ ಬಸ್​ವೊಂದು ಪಲ್ಟಿಯಾಗಿದ್ದು 13ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚೆಂಡೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಇಳಿಕೆ.. ಎಷ್ಟು TMC ನೀರು ಪೋಲಾಗಿದೆ?

ಚೆಂಡೂರು ಕ್ರಾಸ್ ಬಳಿ ಆಂಧ್ರಪ್ರದೇಶ ಮೂಲದ ಬಸ್​ ವೇಗವಾಗಿ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ​ ರಸ್ತೆ ಬದಿಯ ಹೊಲದೊಳಗೆ ಬಿದ್ದಿದೆ. ಬಸ್​ನಲ್ಲಿದ್ದ ಪ್ರಯಾಣಿಕರ ಪೈಕಿ 13ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳನ್ನು ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪಾಂಡ್ಯ ರಿಲೀಸ್​, ರೋಹಿತ್ ರಿಟೈನ್​ಗೆ ಮುಂಬೈ ಬಿಗ್ ಪ್ಲಾನ್​.. ಕ್ಯಾಪ್ಟನ್ ಮಾತ್ರ ಈ ಇಬ್ಬರೂ ಅಲ್ಲ!

ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳೆಲ್ಲ ಆಂಧ್ರ ಪ್ರದೇಶದ ಮೂಲದವರು ಆಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್​ ಪಲ್ಟಿಯಾಗಿದ್ದರಿಂದ ಮುಂಭಾಗವೆಲ್ಲ ಹಾನಿಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಲ್ಟಿಯಾದ ಸಾರಿಗೆ ಬಸ್.. 13ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ, ಇಬ್ಬರ ಸ್ಥಿತಿ ಚಿಂತಾಜನಕ

https://newsfirstlive.com/wp-content/uploads/2024/08/CKB_BUS_ACCIDENT.jpg

Load More