newsfirstkannada.com

ಸಿಎಂಗೆ ಕಾನೂನು ಸಂಕಷ್ಟ.. ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ: ಮುಂದೇನು?

Share :

Published August 17, 2024 at 12:16pm

Update August 17, 2024 at 12:20pm

    ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಮಲ್ಲಿಕಾರ್ಜುನ ಖರ್ಗೆ

    ಕೆಲವೇ ಹೊತ್ತಿನಲ್ಲಿ ತಮ್ಮ ನಿವಾಸಕ್ಕೆ ಬರಲಿರುವ ಎಐಸಿಸಿ ಅಧ್ಯಕ್ಷ

    ಮುಂದಿನ ಹೋರಾಟದ ರೂಪುರೇಷೆಗಳು ಸಿದ್ಧಗೊಳ್ಳುವ ಸಾಧ್ಯತೆ

ಬೆಂಗಳೂರು: ಮುಡಾ ಹಗರಣದಿಂದಾಗಿ ರಾಜ್ಯ ಸರ್ಕಾರಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ ಈಗಾಗಲೇ ದೊಡ್ಡದೊಂದು ಸಂಕಷ್ಟ ಎದುರಾಗಿದೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮವಾಗಿ ಸಿಎಂ ಪತ್ನಿಯವರಿಗೆ 14 ಸೈಟ್​ಗಳನ್ನು ನೀಡಲಾಗಿರುವ ವಿಚಾರದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ.

ಸದ್ಯ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ ಎದುರಾಗಿದೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯರ ಕೈಬಿಡಬಾರದು ಎಂದು ಹಠ ತೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರಿಗೆ ಈಗಾಗಲೇ ಅದರ ಬಗ್ಗೆ ಸ್ಪಷ್ಟ ಸಂದೇಶ ನೀಡಿದೆ.

ಇದನ್ನೂ ಓದಿ: ಕೆಪಿಸಿಸಿ ನಾಯಕರಿಗೆ AICC ನಾಯಕರ ಸೂಚನೆ: ಫೋನ್​ ಕರೆಯಲ್ಲಿ ಹೈಕಮಾಂಡ್ ನಾಯಕರು ಹೇಳಿದ್ದೇನು?

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್​ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಪ್ರಯಾಣ ಬೆಳಸಿರುವ ಮಲ್ಲಿಕಾರ್ಜುನ ಖರ್ಗೆ, ಕೆಲ ಹೊತ್ತಿನಲ್ಲಿಯೇ ತಮ್ಮ ಸದಾಶಿವನಗರದ ನಿವಾಸಕ್ಕೆ ಆಗಮಿಸಲಿದ್ದಾರೆ.ಅಲ್ಲಿ ರಾಜ್ಯ ನಾಯಕರೊಂದಿಗೆ ಮುಂದಿನ ಹೋರಾಟದ ರೂಪುರೇಷೆಗಳು ಸಿದ್ದಗೊಳ್ಳುವ ಸಾಧ್ಯತೆ ಇದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಎಂಗೆ ಕಾನೂನು ಸಂಕಷ್ಟ.. ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ: ಮುಂದೇನು?

https://newsfirstlive.com/wp-content/uploads/2024/08/Mallikharjun-kharge.jpg

Load More