newsfirstkannada.com

ಸಂಪುಟ ಸಭೆ ಬೆನ್ನಲ್ಲೇ ಡಿಕೆ ಶಿವಕುಮಾರ್​​ಗೆ THANKS ಎಂದ ಸಿದ್ದರಾಮಯ್ಯ..!

Share :

Published August 17, 2024 at 7:55pm

    ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕಾರ

    ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಅಗತ್ಯವಿಲ್ಲ-ಡಿಕೆಶಿ

    ರಾಜ್ಯಪಾಲರು ನಿರ್ಣಯ ಖಂಡಿಸಿ ಹೋರಾಡಲು ನಿರ್ಧಾರ

ಮೈಸೂರಿನ ಮುಡಾ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರೋದು ರಾಜ್ಯ ರಾಜಕೀಯಕ್ಕೆ ಶೇಕ್ ಆಗುವಂತೆ ಮಾಡಿದೆ. ಈ ಬೆನ್ನಲ್ಲೇ ಸರ್ಕಾರ ಇಂದು ಸಚಿವ ಸಂಪುಟ ಸಭೆ ನಡೆಸಿತು. ಸಭೆಯಲ್ಲಿ ರಾಜ್ಯಪಾಲರು ನಿರ್ಣಯವನ್ನು ಖಂಡಿಸಿ, ಅದರ ವಿರುದ್ಧ ಹೋರಾಡಲು ಒಕ್ಕೂರಲಿನಿಂದ ನಿರ್ಧರಿಸಲಾಗಿದೆ.

ಇನ್ನು ಸಿದ್ದರಾಮಯ್ಯರ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗಿ ಆಗಿರಲಿಲ್ಲ. ಸಿದ್ದರಾಮಯ್ಯರ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯಪಾಲರ ನಿರ್ಣಯವನ್ನು ಖಂಡಿಸಲಾಯಿತು. ನಂತರ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌; ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕಾರ..!

ಸಂಪುಟ ಸಭೆ ಮುಗಿಸಿ ವಾಪಸ್ ಬರುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್​ ಹಾಗೂ ಸಚಿವರಿಗೆ ಧನ್ಯವಾದ ತಿಳಿಸಿದರು. ಈಗಾಗಲೇ ತುರ್ತಾಗಿ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಡಿ.ಕೆ ಶಿವಕುಮಾರ್, ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಇಡೀ ಸಚಿವ ಸಂಪುಟ ನನ್ನ ಜೊತೆ ಇರುವುದಾಗಿ ಹೇಳಿದೆ. ಪಕ್ಷ ಕೂಡ ಇದನ್ನೇ ಹೇಳಿದೆ. ಪಕ್ಷ, ಸಚಿವರು, ಶಾಸಕರು ಬೆಂಬಲ ನೀಡಿದ್ದಾರೆ. ನನ್ನ ಜೊತೆ ಇರುತ್ತೇನೆಂದು ಹೈಕಮಾಂಡ್ ದೂರವಾಣಿ ಕರೆ ಮಾಡಿ ಹೇಳಿದೆ ಎಂದರು.

ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ. ಇದು ರಾಜಕೀಯ ದುರುದ್ದೇಶದಿಂದ ತೀರ್ಮಾನ ಮಾಡಿದ್ದಾರೆ. ಸರ್ಕಾರವನ್ನ ಅಸ್ಥಿರಗೊಳಿಸಲು ಯತ್ನ ಇದಾಗಿದೆ. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಂಡಿದ್ದಾರೆ? ಬಿಜೆಪಿ, ಜೆಡಿಎಸ್ ಬಡವರ ಪರ ಇರುವ ಕಾರಣಕ್ಕೆ ಸರ್ಕಾರದ ವಿರುದ್ಧ ಷಡ್ಯಂತ್ರ ಇದಾಗಿದೆ. ನಾವು ಗ್ಯಾರಂಟಿ ಯೋಜನೆಗಳನ್ನ ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ನವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಮೋದಿ, ಅಮಿತ್ ಶಾ ಇದನ್ನು ವಿರೋಧಿಸಿದ್ದರು. ನನ್ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಹೊರಟಿದ್ದಾರೆ. ಜನರು ನನ್ನ ಜೊತೆ ಇರೋವರೆಗೂ ಇದು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:IPL 2025ಕ್ಕೂ ಮೊದಲೇ ಪಂಜಾಬ್​​​ ಕಿಂಗ್ಸ್​ನಲ್ಲಿ ದೊಡ್ಡ ವಿವಾದ; ಕೋರ್ಟ್ ಮೆಟ್ಟಿಲೇರಿದ ಪ್ರೀತಿ ಜಿಂಟಾ..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಸಂಪುಟ ಸಭೆ ಬೆನ್ನಲ್ಲೇ ಡಿಕೆ ಶಿವಕುಮಾರ್​​ಗೆ THANKS ಎಂದ ಸಿದ್ದರಾಮಯ್ಯ..!

https://newsfirstlive.com/wp-content/uploads/2024/08/SIDDARAMAIAH-1-3.jpg

Load More