newsfirstkannada.com

BBK11: ವೀಕ್ಷಕರಿಗೆ ಗುಡ್​​ನ್ಯೂಸ್​; ಇಂದು ಬಿಗ್​ ಅಪ್ಡೇಟ್​ ಹೊತ್ತು ತರ್ತಿದೆ ಬಿಗ್​ಬಾಸ್​ ತಂಡ.. ಏನದು?

Share :

Published September 23, 2024 at 8:38am

Update September 23, 2024 at 8:39am

    ಕಾತುರದಿಂದ ಕಾಯುತ್ತಿದ್ದ ವೀಕ್ಷಕರಿಗೆ ಖುಷಿ ಪಡುವ ದಿನ

    ಇದೇ ಸೆಪ್ಟೆಂಬರ್ 29 ರಿಂದ ಬಿಗ್​ಬಾಸ್​ ಗ್ರ್ಯಾಂಡ್​ ಓಪನಿಂಗ್​

    ಬಿಗ್​ಬಾಸ್​ ಸೀಸನ್​ 11ರಿಂದ ಇಂದು ಬಗ್ಗೆ ಅಪ್ಡೇಟ್ ಸಿಕ್ಕಿದೆ

ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11 ಬಂದೇ ಬಿಡ್ತು. ಇದೇ ಸೆಪ್ಟೆಂಬರ್ 29ರಿಂದ ಬಿಗ್​ಬಾಸ್​ ಗ್ರ್ಯಾಂಡ್​ ಓಪನಿಂಗ್​ ಇದೆ. ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ವೀಕ್ಷಕರಿಗೆ ಅಂತೂ ಇಂತೂ ಬಿಗ್​ಬಾಸ್​ ಬಗ್ಗೆ ಒಂದೊಂದಾಗಿ ಅಪ್ಡೇಟ್ ಗೊತ್ತಾಗುತ್ತಿದೆ. ಇದೀಗ ಬಿಗ್​ಬಾಸ್​ ಸೀಸನ್​ 11ರ ಬಗ್ಗೆ ಅಪ್ಡೇಟ್ ಸಿಕ್ಕಿದೆ.

ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕೋರು ಮುಂದೆ ಸ್ನೇಹಿತರಾಗಬಹುದು ಎಂದ ಕಿಚ್ಚ.. ಈ ಮಾತನ್ನು ಹೇಳಿದ್ದು ಮತ್ಯಾರಿಗೂ ಅಲ್ಲ..!

ಹೌದು, ಬಹುನಿರೀಕ್ಷಿತ ಕನ್ನಡದ ಬಿಗ್​ಬಾಸ್ ಸೀಸನ್​ 11ಕ್ಕೆ ದಿನಗಣನೆ ಶುರುವಾಗಿದೆ. ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್​ಬಾಸ್​ ತಂಡ ತೆರೆ ಮರೆ ಹಿಂದೆ ಎಲ್ಲ ರೀತಿಯಲ್ಲೂ ತಯಾರಿ ನಡೆಯುತ್ತಿದೆ. ಈಗ ಬಿಗ್​ಬಾಸ್​ ತಂಡದಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇಂದು 3 ಗಂಟೆ ಸುಮಾರಿಗೆ ಬಿಗ್​ಬಾಸ್​ ಸೀಸನ್ 11ರ ಬಗ್ಗೆ ಅಧಿಕೃತ ಚಾಲನೆ ಸಿಗಲಿದೆ. ಈ ಸುದ್ದಿಗೋಷ್ಠಿಯಲ್ಲಿ ಕಿಚ್ಚು ಸುದೀಪ್ ಭಾಗಿಯಾಗಲಿದ್ದಾರೆ.

ಮೊದಲ ಸೀಸನ್​ನಿಂದ ಹಿಡಿದು ಹತ್ತು ಸೀಸನ್​ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಇದೀಗ ಬಿಗ್​ಬಾಸ್​ ಶೋ 11ನೇ ಸೀಸನ್​ಗೆ ಕಾಲಿಟ್ಟಿದೆ. ಈಗಾಗಲೇ ಪ್ರೋಮೋಗಳ ಮೂಲಕ ಬಿಗ್​ಬಾಸ್ ಸೀಸನ್ 11ರ ಮೇಲೆ ಸಾಕಷ್ಟು ಕುತೂಹಲ ಮೂಡಿಸಿದೆ. ಜೊತೆಗೆ ಈ ಬಾರಿ ಕಿಚ್ಚ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡ್ತಿಲ್ಲ ಅನ್ನೋ ಸುದ್ದಿಯೂ ಹರಿದಾಡಿತ್ತು. ಆ ನಂತರದಲ್ಲಿ ಪ್ರೋಮೋದಲ್ಲಿ ಕಿಚ್ಚ ಆಗಮನವಾಗಿದೆ. ಇಂದು ಬಿಗ್​ಬಾಸ್ ಸೀಸನ್ 11ಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಈ ಬಾರಿಯ ಬಿಗ್​ಬಾಸ್​ಗೆ ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂದು ವೀಕ್ಷಕರು ಕಾಯುತ್ತಿದ್ದಾರೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಸ್ಟಾರ್​ ನಟ, ನಟಿಯರು, ಸೋಷಿಯಲ್​ ಮೀಡಿಯಾ ಸ್ಟಾರ್​ಗಳ ಪಟ್ಟಿಗಳಲ್ಲಿ ಕೆಲವೊಂದು ಹೆಸರುಗಳು ಹರಿದಾಡುತ್ತಿವೆ. ಅವುಗಳು ಎಷ್ಟರ ಮಟ್ಟಿಗೆ ಸತ್ಯ ಎಂದು ಇನ್ನೂ ಕೆಲವೇ ಕೆಲವು ದಿನಗಳಲ್ಲಿ ಉತ್ತರ ಸಿಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BBK11: ವೀಕ್ಷಕರಿಗೆ ಗುಡ್​​ನ್ಯೂಸ್​; ಇಂದು ಬಿಗ್​ ಅಪ್ಡೇಟ್​ ಹೊತ್ತು ತರ್ತಿದೆ ಬಿಗ್​ಬಾಸ್​ ತಂಡ.. ಏನದು?

https://newsfirstlive.com/wp-content/uploads/2024/09/BBK.jpg

Load More