ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿ ಸೋಲು
ಟೀಮ್ ಇಂಡಿಯಾ ಹೀನಾಯ ಸೋಲಿಗೆ ಕಾರಣವೇನು..?
ಭಾರತ ಕ್ರಿಕೆಟ್ ತಂಡಕ್ಕೆ ಬಿಗ್ ಶಾಕ್ ಕೊಟ್ಟ ಸ್ಟಾರ್ ಆಟಗಾರ
ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ನವೆಂಬರ್ 1ನೇ ತಾರೀಕು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊನೆ ಟೆಸ್ಟ್ ಪಂದ್ಯ ನಡೆಯಲಿದೆ. ಹೇಗಾದ್ರೂ ಮಾಡಿ ಈ ಪಂದ್ಯ ಗೆದ್ದು ಟೀಮ್ ಇಂಡಿಯಾ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶ ಮಾಡಲು ಎದುರು ನೋಡುತ್ತಿದೆ. ಇದರ ಮಧ್ಯೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರನ ಬಗ್ಗೆ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ.
ಗೌತಮ್ ಗಂಭೀರ್ ಹೆಡ್ ಕೋಚ್ ಆದ ನಂತರ ಭಾರತ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚು ಮನ್ನಣೆ ನೀಡಲಾಗುತ್ತಿದೆ. ಯುವಕರಿಗೆ ಹೆಚ್ಚು ಆದ್ಯತೆ ನೀಡುತ್ತಿರೋ ಕಾರಣ ಕೆಲವು ಹಿರಿಯ ಆಟಗಾರರಿಗೆ ಅವಕಾಶ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಭಾರತ ತಂಡದ ಸ್ಟಾರ್ ವೇಗಿ ಮತ್ತೆ ಕಮ್ಬ್ಯಾಕ್ ಮಾಡುವುದು ಕಷ್ಟಸಾಧ್ಯವಾಗಿದೆ.
ಸದ್ಯದಲ್ಲೇ ಭುವಿ ನಿವೃತ್ತಿ
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಭುವನೇಶ್ವರ್ ಕುಮಾರ್. ಇವರು ಹಲವು ವರ್ಷಗಳಿಂದ ಭಾರತ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲ ಟಿ20 ಮತ್ತು ಏಕದಿನ ತಂಡಗಳಿಂದಲೂ ಕೈ ಬಿಡಲಾಗಿದೆ. ಇದರಿಂದ ಬೇಸತ್ತ ಭುವಿ ಸದ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತದ ಪರ ಮಿಂಚಿದ್ದ ಭುವಿ
ಭುವನೇಶ್ವರ್ ಕುಮಾರ್ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕವೇ ವಿಶ್ವ ಕ್ರಿಕೆಟ್ ಗಮನ ಸೆಳೆದಿದ್ದರು. ಇವರ ಬೌಲಿಂಗ್ಗೆ ಎದುರಾಳಿಗಳು ಹೆದರುತ್ತಿದ್ದರು. ಎಷ್ಟೋ ಸಂದರ್ಭಗಳಲ್ಲಿ ಟೀಮ್ ಇಂಡಿಯಾಗೆ ಹಲವು ಮಹತ್ವದ ಪಂದ್ಯಗಳನ್ನು ಗೆಲ್ಲಿಸಿಕೊಟ್ಟವರು ಭುವನೇಶ್ವರ್ ಕುಮಾರ್.
ಭುವನೇಶ್ವರ್ ಕುಮಾರ್ ಅವರು ಟೀಮ್ ಇಂಡಿಯಾ ಪರ ತಮ್ಮ ಕೊನೆ ಏಕದಿನ ಪಂದ್ಯ ಆಡಿದ್ದು 2022ರ ಜನವರಿ 21 ರಂದು. ಅದು ದಕ್ಷಿಣ ಆಫ್ರಿಕಾ ವಿರುದ್ಧ ಅನ್ನೋದು ವಿಶೇಷ. 2022ರ ನವೆಂಬರ್ 22 ರಂದು ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಅವರು ತಮ್ಮ ಕೊನೆಯ ಟಿ20 ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. 2018 ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇವರು ದಕ್ಷಿಣ ಆಫ್ರಿಕಾ ವಿರುದ್ಧ 4 ವಿಕೆಟ್ ತೆಗೆದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ