ನ್ಯೂಜಿಲೆಂಡ್ ವಿರುದ್ಧ ಭಾರತ ತಂಡಕ್ಕೆ ಹೀನಾಯ ಸೋಲು
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸೀರೀಸ್ ಭಾರತ ಗೆಲ್ಲಲೇಬೇಕು
ಈ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ಪಂತ್
ಬರೋಬ್ಬರಿ 24 ವರ್ಷಗಳ ಬಳಿಕ ಟೆಸ್ಟ್ ಸರಣಿಯಲ್ಲಿ ತವರಿನಲ್ಲೇ ಭಾರತ ತಂಡವನ್ನು ನ್ಯೂಜಿಲೆಂಡ್ 3-0 ಅಂತರದಿಂದ ಸೋಲಿಸಿ ದಾಖಲೆ ನಿರ್ಮಿಸಿದೆ. 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತ ಭಾರತ ಮೊದಲ ಬಾರಿಗೆ ವೈಟ್ವಾಶ್ ಆಗಿದೆ. 1969ರ ನಂತರ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳು ಸೋತಿರುವುದು ಇದೇ ಮೊದಲು.
ಇತ್ತೀಚೆಗೆ ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 25 ರನ್ಗಳಿಂದ ಸೋತಿದೆ. ನ್ಯೂಜಿಲೆಂಡ್ ನೀಡಿದ 147 ರನ್ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 29.1 ಓವರ್ಗಳಲ್ಲಿ ಕೇವಲ 121 ರನ್ಗಳಿಗೆ ಆಲೌಟ್ ಆಗಿ ಸೋತಿರುವುದು ಭಾರೀ ಮುಖಭಂಗವಾಗಿದೆ.
ಇನ್ನು, ಟೀಮ್ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಸ್ಟಾರ್ ವಿಕೆಟ್ ಬ್ಯಾಟರ್ ರಿಷಬ್ ಪಂತ್. ಬರೋಬ್ಬರಿ 64 ರನ್ ಸಿಡಿಸಿ ಟೀಮ್ ಇಂಡಿಯಾ ಪಡೆಯಲ್ಲಿ ಗೆಲುವಿನ ವಿಶ್ವಾಸ ಮೂಡಿಸಿದ್ರು. ಆದರೆ, ಇವರು ಔಟ್ ಆದ ಕಾರಣ ಭಾರತ ಸೋಲಬೇಕಾಯ್ತು. ಭಾರತ ತಂಡದ ಬ್ಯಾಟರ್ಗಳು ನ್ಯೂಜಿಲೆಂಡ್ ಬೌಲರ್ಗಳ ವಿರುದ್ಧ ಹೀನಾಯ ಪ್ರದರ್ಶನ ನೀಡಿದ್ರು.
ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುನ್ನ ಭಾರತಕ್ಕೆ ಬಿಗ್ ಶಾಕ್
ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಆಸೀಸ್ ಸರಣಿಗೆ ಆಟಗಾರರನ್ನು ಸಜ್ಜುಗೊಳಿಸಲು ಸಿದ್ಧತೆ ಆರಂಭಿಸಿರೋ ಬಿಸಿಸಿಐಗೆ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರದ್ದೇ ದೊಡ್ಡ ಚಿಂತೆಯಾಗಿದೆ.
ಪಂತ್ ಕಾಲಿಗೆ ಗಾಯ
ಭಾರತ ಇದೇ ತಿಂಗಳು ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪಂತ್ ಬಗ್ಗೆ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ. ಇದು ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಚಿಂತಿಸುವಂತೆ ಮಾಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮೊಣಕಾಲಿನ ಗಂಭೀರ ಗಾಯಕ್ಕೆ ಒಳಗಾಗಿದ್ದು, ಇದರ ಮಧ್ಯೆಯೂ ಇಡೀ ಸರಣಿ ಆಡಿದ್ರು. ಆದರೀಗ, ಇವರ ಮೊಣಕಾಲಿನ ಗಾಯ ತೀವ್ರವಾಗಿ ಪಂತ್ ಅವರನ್ನು ಬಾದಿಸುತ್ತಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವುದು ಡೌಟ್ ಆಗಿದೆ.
ಅಸಲಿಗೆ ಆಗಿದ್ದೇನು?
ರಿಷಬ್ ಪಂತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದರು. 37ನೇ ಓವರ್‌ನ ಕೊನೆಯ ಎಸೆತದಲ್ಲಿ ರವೀಂದ್ರ ಜಡೇಜಾ ಎಸೆದ ಚೆಂಡು ನೇರವಾಗಿ ಪಂತ್ ಮೊಣಕಾಲಿಗೆ ಬಿತ್ತು. ಚೆಂಡು ಬಡಿದ ರಭಸಕ್ಕೆ ಪಂತ್ ನೋವಿನಿಂದ ಮೈದಾನದಲ್ಲೇ ಪರದಾಡಿದ್ರು. ತಕ್ಷಣ ಮೈದಾನಕ್ಕೆ ಬಂದ ಫಿಸಿಯೋ ಪಂತ್‌ಗೆ ಪ್ರಥಮ ಚಿಕಿತ್ಸೆ ನೀಡಿದ್ರು. ಆದರೆ ಚಿಕಿತ್ಸೆಯಿಂದ ಪಂತ್ ಚೇತರಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.
ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು; ಬಿಸಿಸಿಐನಿಂದ ಕೆ.ಎಲ್ ರಾಹುಲ್ಗೆ ಮಹತ್ವದ ಸೂಚನೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ