/newsfirstlive-kannada/media/post_attachments/wp-content/uploads/2025/07/HSN-HEART.jpg)
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ.
ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಇದನ್ನೂ ಓದಿ: ಪ್ರಸಾರ ಭಾರತಿಯಲ್ಲಿ ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಉದ್ಯೋಗಗಳು ಖಾಲಿ.. ಅಪ್ಲೇ ಮಾಡಿ!
ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಮತ್ತೆ ಜೋರು ಮಳೆ.. ಎರಡು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ