ಖಾಲಿ ಜಾಗದಲ್ಲಿ ಆಟವಾಡುತ್ತಿದ್ದ 4 ವರ್ಷದ ಮಗು ದಾರುಣ ಸಾವು
ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ
ಆಸ್ಪತ್ರೆಯಲ್ಲಿ ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ
ವಿಜಯನಗರ: ಮನೆ ಪಕ್ಕದ ಖಾಲಿ ಜಾಗದಲ್ಲಿ ಆಟವಾಡುತ್ತಿದ್ದ 4 ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿಯಲ್ಲಿ ನಡೆದಿದೆ. ವಿರಾಟ್ ಜೆ. (04) ಸಾವನ್ನಪ್ಪಿದ ನತದೃಷ್ಟ ಮಗು.
ಇದನ್ನೂ ಓದಿ: ಉಡುಪಿ ರೀಲ್ಸ್ ಹೆಂಡತಿಯ ಕೊಲೆ ಕೇಸ್‌ಗೆ ಭಯಾನಕ ಟ್ವಿಸ್ಟ್.. ಮಹಿಳೆಯ 2ನೇ ಗಂಡ ಬಾಯ್ಬಿಟ್ಟಿದ್ದೇನು?
ವಿರಾಟ್, ಮನೆ ಪಕ್ಕದ ಖಾಲಿ ಜಾಗದಲ್ಲಿ ನಿಂತಿದ್ದ ಚರಂಡಿ ನೀರಿಗೆ ಆಟವಾಡಲು ಹೋಗಿದ್ದಾನೆ. ಆಟವಾಡುತ್ತಾ ಚರಂಡಿ ನೀರಿಗೆ ಬಿದ್ದಿದ್ದಾನೆ. ತಕ್ಷಣವೇ ಮಗು ಚರಂಡಿಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಆಸ್ಪತ್ರೆಯಲ್ಲಿ ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಈ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ಮೃತ ಮಗುವಿನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ: ಭೀಕರ ಅಪಘಾತ.. ಪುಟಾಣಿ ಮಕ್ಕಳು ಸೇರಿ 24 ಮಂದಿ ದಾರುಣ ಸಾವು; ಉಳಿದವರಿಗಾಗಿ ಹುಡುಕಾಟ!
ನಂತರ ಶಾಸಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ಚರಂಡಿ ನಿಂತಿರೋ ಪ್ರದೇಶಗಳನ್ನು ಕೂಡಲೇ ಸ್ವಚ್ಛಗೊಳಿಸಲು ನಗರಸಭೆ ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ