ಮಧ್ಯರಾತ್ರಿ ಸಂಭವಿಸಿದ ಬೆಂಕಿ ಅನಾಹುತಕ್ಕೆ 5 ಅಂತಸ್ತಿನ ಕಟ್ಟಡ ಸುಟ್ಟು ಭಸ್ಮ
ಅಪಾಯದಲ್ಲಿದ್ದ ಮೂವರು ಸೆಕ್ಯೂರಿಟಿ ಗಾರ್ಡ್‌ಗಳ ರಕ್ಷಣೆಗೆ ಹರಸಾಹಸ
ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಧಗಧಗಿಸಿದ ಬೆಂಕಿಗೆ ಬಾಣಸವಾಡಿ ಔಟರ್ ರಿಂಗ್ ರೋಡ್ ಬಳಿಯ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ಭಸ್ಮವಾಗಿದೆ.
5 ಅಂತಸ್ತಿನ ಈ ಕಟ್ಟಡದಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿಗಳಿದ್ದವು. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಬೆಂಕಿ ಅವಘಡ ಸಂಭವಿಸಿದಾಗ ಮೂವರು ಸೆಕ್ಯೂರಿಟಿ ಗಾರ್ಡ್‌ಗಳು ಕಟ್ಟಡದಲ್ಲೇ ಸಿಲುಕಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಸೆಕ್ಯೂರಿಟಿ ಗಾರ್ಡ್‌ಗಳನ್ನ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಹೊತ್ತಿ ಉರಿದಿರುವ 5 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅನಾಹುತ ತಪ್ಪಿದೆ.
ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್ ಇತ್ತು. 3, 4ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಸಾಫ್ಟ್‌ವೇರ್ ಕಂಪನಿಗಳಿದ್ದು ಇವುಗಳಿಗೂ ಬೆಂಕಿ ತಗುಲಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ