ಬೆಂಗಳೂರು ನಗರ ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ?
ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ರಸ್ತೆ ತುಂಬೆಲ್ಲಾ ಬ್ಯಾನರ್
ಬ್ರಾಂಡ್ ಬೆಂಗಳೂರಿಗೆ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳಿಂದ ಕಳಂಕ
ಬೆಂಗಳೂರು: ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ರೂ ರಾಜ್ಯ ಸರ್ಕಾರ ಕ್ಯಾರೇ ಅಂತಿಲ್ವಾ? ಇವತ್ತು ಸಿಲಿಕಾನ್ ಸಿಟಿ ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿದ್ದ ಬ್ಯಾನರ್, ಫ್ಲೆಕ್ಸ್‌ಗಳನ್ನ ನೋಡಿದ ಸಾರ್ವಜನಿಕರು ಹೀಗೆ ಪ್ರಶ್ನೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆಯೇ ಬಂಟಿಂಗ್, ಬ್ಯಾನರ್‌ಗಳ ಅಬ್ಬರ. ವಿಧಾನಸೌಧದ ಪಕ್ಕದ ರಸ್ತೆಯಲ್ಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಹೈಕೋರ್ಟ್ ಆದೇಶ ಪಾಲನೇ ಮಾಡಬೇಕಿದ್ದ ಮುಖ್ಯಮಂತ್ರಿ, ಗೃಹ ಸಚಿವರೇ ಹೀಗೆ ಮಾಡಿದ್ರೆ ಹೇಗೆ ಎನ್ನಲಾಗುತ್ತಿದೆ.
ನಿನ್ನೆಯಷ್ಟೇ ರಾಜ್ಯ ಹೈಕೋರ್ಟ್ ಬೆಂಗಳೂರು ನಗರದಲ್ಲಿ ಬಂಟಿಂಗ್, ಬ್ಯಾನರ್‌ಗಳನ್ನು ಹಾಕುವುದನ್ನು ತಡೆಯಲು ಸರ್ಕಾರವನ್ನು ಎಚ್ಚರಿಸಿತ್ತು. ಹೈಕೋರ್ಟ್ ಆದೇಶಿದ ಮರುದಿನವೇ ನಗರದಲ್ಲಿ ಮತ್ತೆ ಬ್ಯಾನರ್‌ಗಳು ರಾರಾಜಿಸುತ್ತಿವೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಬರ್ತ್ ಡೇ ಅಂಗವಾಗಿ ಅವರ ಬೆಂಬಲಿಗರಾದ ಮಾಗಡಿ ಜಯರಾಮ್, ಮಧುಗಿರಿ ಜಯಚಂದ್ರ, ಜಗದೀಶ್ & ಸುನೀಲ್ ಅವರ ಹೆಸರಿನ ಬ್ಯಾನರ್‌ಗಳನ್ನು ಹಾಕಲಾಗಿದೆ.
ಇನ್ನು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ರಸ್ತೆ ತುಂಬೆಲ್ಲಾ ಬ್ಯಾನರ್‌ಗಳೇ ರಾರಾಜಿಸುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ಅವರ 76ನೇ ಹುಟ್ಟುಹಬ್ಬ. ಈ ಹಿನ್ನೆಲೆ ಸಿದ್ದರಾಮಯ್ಯ ಅಭಿಮಾನಿಗಳಿಂದ ಬ್ಯಾನರ್ ಅಳವಡಿಸೋ ದೃಶ್ಯ ಕಂಡು ಬಂದಿದೆ.
ನಿನ್ನೆ ಹೈಕೋರ್ಟ್ ಹೇಳಿದ್ದೇನು?
ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ವಿಚಾರದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಗರಂ ಆಗಿದ್ದರು. ಬೆಂಗಳೂರಲ್ಲಿ ಬ್ಯಾನರ್ ಹಾಕುವುದನ್ನ ತಡೆಯಲು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿನ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 FIR ಹಾಕಲಾಗಿದೆ. ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮವೇಕಿಲ್ಲ ಎಂದು ನ್ಯಾಯಮೂರ್ತಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಉದ್ಯಾನನಗರಿ ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ? ಬ್ರಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್‌ಗಳಿಂದ ಕಳಂಕ ಎದುರಾಗಿದೆ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ? ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ ನೀವೇನು ಮಾಡುತ್ತಿದ್ದೀರಿ? ಇನ್ನು ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ಬಿಬಿಎಂಪಿ, ರಾಜ್ಯ ಸರ್ಕಾರ ತಲಾ 50 ಸಾವಿರ ಠೇವಣಿ ಇಡಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು. ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆಗೆ ಸಿಜೆ ಪ್ರಸನ್ನ ಬಿ. ವರಾಳೆ, ನ್ಯಾ. ಎಂ.ಜಿ.ಎಸ್. ಕಮಲ್ ರಿದ್ದ ಪೀಠ ಆದೇಶ ನೀಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ