newsfirstkannada.com

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ; ಕಾರಣವೇನು?

Share :

Published May 10, 2024 at 8:54pm

  ಮಹಿಳೆ ಒಂಟಿಯಾಗಿದ್ದಾಗ ಮನೆಗೆ ಬಂದಿರುವ ದುಷ್ಕರ್ಮಿಯ ಕೃತ್ಯ

  ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ

  ಗಂಡ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಮಹಿಳೆ ಬರ್ಬರ ಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ದುರ್ಘಟನೆ ನಡೆದಿದೆ. 36 ವರ್ಷದ ದಿವ್ಯಾ ಕೊಲೆಯಾದ ಮಹಿಳೆ.

ಮಹಿಳೆ ಒಂಟಿಯಾಗಿದ್ದಾಗ ಮನೆಗೆ ಬಂದಿರುವ ಆರೋಪಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಕೊಲೆಗೈದ ದುಷ್ಕರ್ಮಿ ಕುತ್ತಿಗೆಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ.

ಇದನ್ನೂ ಓದಿ: ಕೊಡಗು ಬಾಲಕಿ ಬರ್ಬರ ಹತ್ಯೆ ಕೇಸ್‌ಗೆ ರೋಚಕ ಟ್ವಿಸ್ಟ್‌.. ರುಂಡ ಹುಡುಕಾಡಿದ ಪೊಲೀಸರು ಹೇಳಿದ್ದೇನು? 

ಕೊಲೆಯಾದ ದಿವ್ಯಾ ಅವರ ಗಂಡ ಗುರುಮೂರ್ತಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ. ಗಂಡ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಈ ಮರ್ಡರ್ ನಡೆದಿದೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಆರ್ ಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ; ಕಾರಣವೇನು?

https://newsfirstlive.com/wp-content/uploads/2024/05/Bangalore-lady-Murder-1.jpg

Load More