ಕಾಂಗ್ರೆಸ್ ಮುಖಂಡ ಪ್ರಯಾಣಿಸ್ತಿದ್ದ ಕಾರು ಅಪಘಾತ.. ಕಲಬುರಗಿಯಲ್ಲಿ ಕಾಲುವೆಗೆ ಪಲ್ಟಿ ಹೊಡೆದ ವಾಹನ

author-image
Bheemappa
Updated On
ಕಾಂಗ್ರೆಸ್ ಮುಖಂಡ ಪ್ರಯಾಣಿಸ್ತಿದ್ದ ಕಾರು ಅಪಘಾತ.. ಕಲಬುರಗಿಯಲ್ಲಿ ಕಾಲುವೆಗೆ ಪಲ್ಟಿ ಹೊಡೆದ ವಾಹನ
Advertisment
  • ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಗಾಯ
  • ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು
  • ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದಿದ್ದರಿಂದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ವಿಠಲ್ ಜಾಧವ್, ಪತ್ನಿ ರತ್ನಾಬಾಯಿ, ಪುತ್ರಿ ಸೋನಾಲಿ, ಪುತ್ರ ವಿನೋಧ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. MH- 02, BY- 2230 ನೋಂದಣಿಯ ಚೆವ್ರೋಲೇಟ್ ಸ್ಪಾರ್ಕ್ ಕಾರು ಅಪಘಾತವಾಗಿದೆ. ರಾವೂರ್ ಗ್ರಾಮದಿಂದ ಕಲಬುರಗಿ ನಗರಕ್ಕೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ.

ಇದನ್ನೂ ಓದಿ:ನಂಬಿಕೆ ಉಳಿಸಿಕೊಂಡ ವಿಜಯೇಂದ್ರ.. ಕಾಂಗ್ರೆಸ್​ ಕಟ್ಟಿ ಹಾಕುವಲ್ಲಿ ಯಶಸ್ವಿ ಆಗಿದ್ದು ಹೇಗೆ..?

ಇದರಿಂದ ಕಾರು ಕಾಲುವೆಗೆ ಉರುಳಿ ಬಿದ್ದಿದ್ದು ಒಳಗಿದ್ದ ಒಂದೇ ಕುಟುಂಬದ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ರಕ್ಷಣೆಗೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಲಬುರಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment