newsfirstkannada.com

ಭಟ್ಕಳ ಮಸೀದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು

Share :

Published January 14, 2024 at 3:33pm

Update January 14, 2024 at 4:00pm

    ‘ರಣಭೈರವ ಎದ್ದಾಗಿದೆ. ಮತ್ತೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ’

    ‘ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು’

    ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ

ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಮೇಲೆ ಪ್ರಕರಣ ದಾಖಲಾಗಿದೆ. ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನದ ಆರೋಪದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೊ ಕೇಸ್ ದಾಖಲು ಮಾಡಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರು, ಬಾಬ್ರಿ ಮಸೀದಿಯಂತೆ ಹಿಂದೂ ದೇವಸ್ಥಾನಗಳ ಕುರುಹು ಇರೋ ಇತರೆ ಮಸೀದಿಗಳನ್ನು ಒಡೆಯುವ ಬಗ್ಗೆ ಮಾತನಾಡಿದ್ದರು. ಅಲ್ಲದೇ, ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ್ದರು. ಜೊತೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಅನ್ನೋ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.
ಸಂಸದ ಅನಂತ ಕುಮಾರ್ ಹೆಗಡೆಯವರ ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕುಮಟಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505 ಹಾಗೂ 153 (A)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: VIDEO: ‘ಅನಂತಕುಮಾರ್ ಹೆಗಡೆ ಅವ್ರೇ ಚಾಲೆಂಜ್​ಗೆ ರೆಡಿ, ತಾಕತ್ತಿದ್ರೆ ಬನ್ನಿ’- ಶಾಸಕ ಪ್ರದೀಪ್ ಈಶ್ವರ್

ಅನಂತಕುಮಾರ್ ಹೆಗಡೆ ಹೇಳಿದ್ದೇನು?
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ನಾಯಕರು ಗೈರಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅನಂತಕುಮಾರ್ ಹೆಗಡೆ ಅವರು ತೀವ್ರ ವಾಗ್ದಾಳಿ ನಡೆಸಿದ್ದರು. ರಣಭೈರವ ಎದ್ದಾಗಿದೆ. ಮತ್ತೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷದ ಸೇಡು ತೀರಿಸಿಕೊಳ್ಳದಿದ್ರೆ ಇದು ಹಿಂದೂ ರಕ್ತವಲ್ಲ ಎಂದು ಹಿಂದೂ ಸಮಾಜ ಹೇಳುತ್ತದೆ. ನಮ್ಮದು ಋಣವಿಟ್ಟುಕೊಂಡಿರುವ ಸಮಾಜವಲ್ಲ, ಋಣವನ್ನು ತೀರಿಸಿಯೇ ತೀರಿಸ್ತೇವೆ. ಸಾವಿರ ವರ್ಷಗಳ ಋಣವಿದೆ ನಮಗೆ, ಅದನ್ನು ತೀರಿಸದೇ ಸುಮ್ಮನೆ ಕುಳಿತರೆ ಅದಕ್ಕೆ ಹಿಂದೂ ರಕ್ತ ಅಂತಾ ಕರಿಯೋದೆ ಇಲ್ಲ. ರಾಮಜನ್ಮಭೂಮಿಯ ಜತೆ ಮೊದಲ ಪ್ರಾರಂಭ ಶುರುವಾಗಿದೆ. ಇಡೀ ಹಿಂದೂ ಸಮಾಜವನ್ನು ಜಾತಿ, ಪ್ರಾದೇಶಿಕ, ಭಾಷೆ ಹೆಸರಿನಲ್ಲಿ ಒಡೆದಿದ್ದಾರೆ. ಮೂರ್ಖರಾಮಯ್ಯನಂತವರು ಇನ್ನೂ ಸಮಾಜವನ್ನು ಒಡೆಯುತ್ತನೇ ಇದ್ದಾರೆ ಎಂದಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಟ್ಕಳ ಮಸೀದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು

https://newsfirstlive.com/wp-content/uploads/2024/01/Siddaramaiah-Ananth-Kumar-Hegde.jpg

Load More