newsfirstkannada.com

ಕಟ್ಟಡದ ಮೇಲಿನಿಂದ ಕೆಳಕ್ಕೆ ಬಿದ್ದ ಬಾಲಕ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

27-08-2023

    ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದ ಕೆಳಗೆ ಮಗು

    ಉಳ್ಳಾಲ ತಾಲೂಕಿನ ಮಂಜನಾಡಿಯಲ್ಲಿ ಘಟನೆ

    ಪೋಷಕರು ನೀವೆಲ್ಲಾ ಓದಲೇಬೇಕಾದ ಸ್ಟೋರಿ ಇದು!

ಮಂಗಳೂರು: ಆಟವಾಡುತ್ತಿದ್ದಾಗ ಕಟ್ಟಡದಿಂದ ಕೆಳಗೆ ಬಿದ್ದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರೋ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ.

ಈ ಘಟನೆಯು ಆಗಸ್ಟ್​ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಬಾಲಕ ತಾಯಿ ಜೊತೆ ಬ್ಯಾಂಕ್​ಗೆ ಬಂದಿದ್ದ. ಈ ವೇಳೆ ತಾಯಿ ಬ್ಯಾಂಕ್​ನ ಒಳಗಿರುವಾಗ ಮಗುವು ಆಟವಾಡುತ್ತಾ ಹೊರಗೆ ಬಂದಿದೆ. ಬಳಿಕ ಕಟ್ಟಡದ ಹೊರಗೆ ಹಾಕಿದ್ದ ಕಬ್ಬಿಣದ ಗ್ರಿಲ್ ಹತ್ತಲು ಬಾಲಕ ಪ್ರಯತ್ನಿಸಿದ್ದಾನೆ.

ಗ್ರಿಲ್ ಹತ್ತುವಾಗ ಆಯತಪ್ಪಿ ಮೊದಲ ಮಹಡಿಯಿಂದ ಗ್ರೌಂಡ್ ಫ್ಲೋರ್​ಗೆ ಬಿದ್ದಿದೆ. ಬಾಲಕ ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಗುವು ಬಿದ್ದ ರಭಸಕ್ಕೆ ತಲೆ ಹಾಗೂ ಕೈಗೆ ಗಂಭೀರವಾಗಿ ಗಾಯಗಳಾಗಿದ್ದು ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಟ್ಟಡದ ಮೇಲಿನಿಂದ ಕೆಳಕ್ಕೆ ಬಿದ್ದ ಬಾಲಕ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2023/08/death-14.jpg

Load More