/newsfirstlive-kannada/media/post_attachments/wp-content/uploads/2024/04/SMG_CAR.jpg)
ಶಿವಮೊಗ್ಗ: ಅತಿ ವೇಗವಾಗಿ ಬಂದ ಜೀಪ್​ವೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಅರಸಾಳು ಬಳಿಯ 9ನೇ ಮೈಲುಗಲ್ಲು ಸಮೀಪದಲ್ಲಿ ನಡೆದಿದೆ.
ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಬೀನ್ (45) ಮೃತಪಟ್ಟವರು. ಕಾರಿನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ ವ್ಯಕ್ತಿ ಅರಸಾಳು ಬಳಿಯ 9ನೇ ಮೈಲುಗಲ್ಲು ಸಮೀಪ ಬರುತ್ತಿದ್ದಂತೆ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಮೃತದೇಹವನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಇದನ್ನೂ ಓದಿ:ನಗರದ ರೈಲ್ವೆ ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ.. 6 ಜನರು ಸಜೀವ ದಹನ.. ಹಲವರು ಗಂಭೀರ
/newsfirstlive-kannada/media/post_attachments/wp-content/uploads/2024/04/SMG_CAR_1.jpg)
ಇದನ್ನೂ ಓದಿ: ಪಾಕಿಸ್ತಾನಕ್ಕೆ ‘ಹೃದಯ’ ಕೊಟ್ಟ ಭಾರತೀಯ.. ಯುವತಿಗೆ ಮರುಜನ್ಮ; ಇದು ಹಾರ್ಟ್ ಟಚ್ಚಿಂಗ್ ಸ್ಟೋರಿ!
ಆಕ್ಸಿಡೆಂಟ್​ನಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ ಮೃತದೇಹ ಕಾರಿನೊಳಗೆ ಸಿಕ್ಕಿ ಹಾಕಿಕೊಂಡಿತ್ತು. ಹೀಗಾಗಿ ಅದನ್ನು ಹೊರ ತೆಗೆಯಲು ಸ್ಥಳೀಯರಿಗೆ ಕೊಂಚ ಕಷ್ಟವಾಗಿತ್ತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಆಗಿದೆ ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us