newsfirstkannada.com

ಅಪಾರ್ಟ್‌ಮೆಂಟ್ 10ನೇ ಮಹಡಿಯಿಂದ ಕೆಳಗೆ ಹಾರಿದ ವಿವಾಹಿತ ಮಹಿಳೆ ಸಾವು; ಕಾರಣವೇನು?

Share :

23-06-2023

    ಎರಡು ವರ್ಷದ ಹಿಂದಷ್ಟೇ ಮದುವೆಯಾಗಿದ್ದ 27 ವರ್ಷದ ಅಮೃತಾ ಶರ್ಮಾ

    ಅಪಾರ್ಟ್‌ಮೆಂಟ್‌ ಕಿಚನ್‌ಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಜಿಗಿದ ಮಹಿಳೆ

    ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲಖನೌ ಮೂಲದ ಅಮೃತಾ ಶರ್ಮಾ

ಬೆಂಗಳೂರು: ಅಪಾರ್ಟ್‌ಮೆಂಟ್ 10ನೇ ಮಹಡಿಯಿಂದ ಕೆಳಗೆ ಬಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ. ಲಖನೌ ಮೂಲದ 27 ವರ್ಷದ ಅಮೃತಾ ಶರ್ಮಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅಮೃತಾ ಶರ್ಮಾ ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಕಿಚನ್‌ಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ ಎನ್ನಲಾಗಿದೆ.

ಅಪಾರ್ಟ್‌ಮೆಂಟ್ ಮೇಲಿಂದ ಮಹಿಳೆ ಬಿದ್ದ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಅಮೃತಾ ಶರ್ಮಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಖನೌ ಮೂಲದ ವಿವಾಹಿತ ಮಹಿಳೆ ತನ್ನ ಕುಟುಂಬದ ಜೊತೆ ನಾಗೇನಹಳ್ಳಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಮಹಿಳೆ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದ ಅಮೃತಾ ಶರ್ಮಾ ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಸದ್ಯ ಲಖನೌನಿಂದ ಮೃತಳ ತಾಯಿ ಆಗಮಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಅಪಾರ್ಟ್‌ಮೆಂಟ್ 10ನೇ ಮಹಡಿಯಿಂದ ಕೆಳಗೆ ಹಾರಿದ ವಿವಾಹಿತ ಮಹಿಳೆ ಸಾವು; ಕಾರಣವೇನು?

https://newsfirstlive.com/wp-content/uploads/2023/06/Bangalore-Lady-Sucide.jpg

Load More