Advertisment

ಇಬ್ಬರು ಮಕ್ಕಳ ಹತ್ಯೆ ಮಾಡಿ ಜೈಲು ಸೇರಿದ್ದ ತಾಯಿ.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆ**ತ್ಯೆ

author-image
Bheemappa
Updated On
ಇಬ್ಬರು ಮಕ್ಕಳ ಹತ್ಯೆ ಮಾಡಿ ಜೈಲು ಸೇರಿದ್ದ ತಾಯಿ.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆ**ತ್ಯೆ
Advertisment
  • ಮಕ್ಕಳನ್ನು ಕೊಲೆ ಮಾಡಿದ್ದ ದಿನವೇ ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು
  • ಏಪ್ರಿಲ್ 11 ರಂದು ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಯನ್ನು ಕಳುಹಿಸಲಾಗಿತ್ತು
  • ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ

ಬೆಂಗಳೂರು: ಜಾಲಹಳ್ಳಿಯಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಆರೋಪಿ ಗಂಗಾದೇವಿ ಶೌಚಾಲಯದಲ್ಲಿ ತನ್ನ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisment

ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ಕೇಸ್​ನಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದ ಗಂಗಾದೇವಿ ಜೈಲಿಗೆ ಹೋಗಿದ್ದ ದಿನ ಏಪ್ರಿಲ್​ 11 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಶೌಚಾಲಯಕ್ಕೆ ಹೋಗಿ ಅಲ್ಲಿ ತನ್ನ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 13 ರಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಳಿಕ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

publive-image

ಇದನ್ನೂ ಓದಿ: ‘ಇಬ್ಬರು ಮಕ್ಕಳನ್ನು ಸಾಯಿಸಿದ್ದೇನೆ..’ ಕರುಣೆ ಇಲ್ಲದೇ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ಪಾಪಿ ತಾಯಿ

ಏಪ್ರಿಲ್ 9ರ ರಾತ್ರಿ ಮಗಳು ಲಕ್ಷ್ಮೀ (9), ಮಗ ಗೌತಮ್​​ (7) ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಗಂಗಾದೇವಿ ಬಳಿಕ ಪೊಲೀಸರಿಗೆ ಫೋನ್ ಮಾಡಿ ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು. ಮಾಹಿತಿ ಪಡೆದ ಪೊಲೀಸರು ತಕ್ಷಣ ಮನೆಗೆ ಹೋಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆಯಲ್ಲಿ ಎಲ್ಲ ಮಾಹಿತಿ ಪಡೆದು ಬಳಿಕ ಆಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಏ.​ 11 ರಂದು ಕಳುಹಿಸಿದ್ದರು. ದುರಂತ ಎಂದರೆ ಅಂದೇ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment