newsfirstkannada.com

ಹಾಸನ ಲೈಂಗಿಕ ದೌರ್ಜನ್ಯ ಕೇಸ್‌ಗೆ ಹೊಸ ಟ್ವಿಸ್ಟ್‌; ರೇವಣ್ಣ ಮನೆಯಲ್ಲಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿದ್ದೇನು?

Share :

Published May 6, 2024 at 12:44pm

Update May 6, 2024 at 12:45pm

    ಬಸವನಗುಡಿಯಲ್ಲಿರುವ ರೇವಣ್ಣನವರ ಶಿವಸ್ಮಿತ ನಿವಾಸಕ್ಕೆ ಭೇಟಿ

    ಹೆಚ್‌.ಡಿ ರೇವಣ್ಣ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು

    ಪ್ರಜ್ವಲ್ ರೇವಣ್ಣ ಮೈ ಮುಟ್ಟುತ್ತಾ ಹೊಟ್ಟೆ ಜಿಗುಟುತ್ತಿದ್ದರು - ಸಂತ್ರಸ್ತೆ

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳ ತನಿಖೆ ಚುರುಕಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿರುವ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತರಲಾಗಿದೆ. ರೇವಣ್ಣ ಅವರ ಬಸವನಗುಡಿಯ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆತಂದು ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ.

ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಸಂತ್ರಸ್ತೆಯನ್ನು ಕರೆ ತರಲಾಗಿದೆ. ಬಸವನಗುಡಿಯಲ್ಲಿರುವ ರೇವಣ್ಣನವರ ಶಿವಸ್ಮಿತ ನಿವಾಸದಲ್ಲಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳ ಮಹಜರು ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಹಾಜರಿದ್ದು, ಯಾರಿಗೂ ಮನೆ ಒಳಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ.

ಇದನ್ನೂ ಓದಿ: ಪ್ರಜ್ವಲ್‌ ಮೇಲೆ ಹದ್ದಿನ ಕಣ್ಣು, ಲೊಕೇಶನ್ ಪತ್ತೆಹಚ್ಚಿದ SIT; ಇಂದು ವಶಕ್ಕೆ ಪಡೆಯಲು ಸಿದ್ಧತೆ 

ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಮನೆಯಲ್ಲಿ ಸಂಪೂರ್ಣ ಮಹಜರು ಮಾಡಲಾಗಿದೆ. ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡ ರೇವಣ್ಣ ಅವರ ಮನೆಗೆ ಭೇಟಿ ನೀಡಿದೆ. ಹೊಳೆನರಸೀಪುರ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇಲೆ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಸೆಕ್ಷನ್ ಅಡಿ ಕೇಸ್ ದಾಖಲಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಹೊಳೆನರಸೀಪುರ ನಿವಾಸದಲ್ಲಿ ಮಹಜರು ನಡೆಸಿದ್ದ ಎಸ್.ಐ.ಟಿ ಅಧಿಕಾರಿಗಳು ರೇವಣ್ಣರ ಬಸವನಗುಡಿ ನಿವಾಸಕ್ಕೆ ಸಂತ್ರಸ್ಥೆಯನ್ನ ಕರೆತಂದಿದ್ದಾರೆ.

ರೇವಣ್ಣ ಅವರ ಬಸವನಗುಡಿ ನಿವಾಸದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ಸಂತ್ರಸ್ತೆಯಿಂದ ಹೇಳಿಕೆ ದಾಖಲು ಮಾಡಿದ್ದರು. ಈ ಆರೋಪಗಳ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳದಲ್ಲೇ ಸ್ಥಳ ಮಹಜರು ಪ್ರಕ್ರಿಯೆ ಮಾಡಲಾಗಿದೆ. ಸ್ಥಳ ಮಹಜರು ಮಾಡುತ್ತಿರುವುದನ್ನು ಅಧಿಕಾರಿಗಳು ಚಿತ್ರೀಕರಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೇವಣ್ಣಗೆ ಇರೋದು ಅದೊಂದೇ ದಾರಿ.. ಅವರ ಮುಂದಿನ ಅಪ್ಷನ್ ಏನು..?

ರೇವಣ್ಣ, ಪ್ರಜ್ವಲ್ ಮೇಲಿರುವ ಆರೋಪಗಳೇನು?
ಹೊಳೆನರಸೀಪುರದಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆ H.D ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರೇವಣ್ಣ ಅವರು ತಮ್ಮ ಕೊಠಡಿಗೆ ಬರುವಂತೆ ತನ್ನನ್ನು ಆಹ್ವಾನಿಸುತ್ತಿದ್ದರು. ಮನೆಯ ಸ್ಟೋರ್ ರೂಮ್‌ನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ರೇವಣ್ಣ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಸೀರೆಯ ಪಿನ್ ಕಿತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂಬ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಜ್ವಲ್ ರೇವಣ್ಣ ಹಿಂದಿನಿಂದ ಬಂದು ಮೈ ಮುಟ್ಟುತ್ತಾ ಹೊಟ್ಟೆ ಜಿಗುಟುತ್ತಿದ್ದರು. ಇದೇ ರೀತಿ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆ ದೂರು‌ ನೀಡಿದ್ದಾರೆ. ತನ್ನ ಮಗಳ ಫೋನ್‌ಗೆ ಹಲವು ಬಾರಿ ಪ್ರಜ್ವಲ್ ರೇವಣ್ಣ ವಿಡಿಯೋ ಕಾಲ್ ಮಾಡುತ್ತಿದ್ದರು. ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸ್ತಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಲೈಂಗಿಕ ದೌರ್ಜನ್ಯ ಕೇಸ್‌ಗೆ ಹೊಸ ಟ್ವಿಸ್ಟ್‌; ರೇವಣ್ಣ ಮನೆಯಲ್ಲಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿದ್ದೇನು?

https://newsfirstlive.com/wp-content/uploads/2024/05/Prajwal-Revanna-Hd-Revanna.jpg

Load More