newsfirstkannada.com

ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಮರ್ಡರ್; ಬೆಂಗಳೂರಲ್ಲಿ ಒಂಟಿ ಮಹಿಳೆ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್‌!

Share :

Published April 23, 2024 at 1:19pm

    ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು

    ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ ಒಂಟಿಯಾಗಿದ್ದರು

    ಶೋಭಾ ಕೊಲೆಯಾದ ದಿನ ಮಹಿಳೆ ಮನೆಗೆ ಬಂದು ಹೋಗಿದ್ದ ಆರೋಪಿ ನವೀನ್

ಬೆಂಗಳೂರು: ಮನೆಯಲ್ಲಿ ನಗ್ನವಾಗಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ ನಡೆದಿತ್ತು. ಒಂಟಿ ಮಹಿಳೆ ಕೊಲೆ ಪ್ರಕರಣವನ್ನ ಕೊಡಿಗೇಹಳ್ಳಿ ಪೊಲೀಸರು ಬೇಧಿಸಿದ್ದು, ಆರೋಪಿಯನ್ನ ಬಂಧಿಸಿದ್ದಾರೆ.

ಕಳೆದ ಏಪ್ರಿಲ್ 19ರಂದು ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. ಮೃತ ಶೋಭಾ ಅವರು ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದರು. ಏಪ್ರಿಲ್ 19ರಂದು ಮಗಳು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಕೊಡಿಗೇಹಳ್ಳಿ ಪೊಲೀಸರು ನವೀನ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ನವೀನ್ ಹೇರೋಹಳ್ಳಿ ನಿವಾಸಿಯಾಗಿದ್ದ. ಇನ್‌ಸ್ಟಾಗ್ರಾಂನಲ್ಲಿ ಶೋಭಾಗೆ ನವೀನ್ ಪರಿಚಯವಾಗಿದ್ದ. ಪರಿಚಯದಿಂದ ಸ್ನೇಹ ಬೆಳೆದು ಇಬ್ಬರ ಮಧ್ಯೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಮೊಬೈಲ್ ನೋಡುತ್ತಿದ್ದಾಗ 16 ವರ್ಷದ ಬಾಲಕ ದಿಢೀರ್ ಸಾವು; ವೈದ್ಯರಿಂದ ಶಾಕಿಂಗ್‌ ರಿಪೋರ್ಟ್‌; ಆಗಿದ್ದೇನು?

ಶೋಭಾ ಕೊಲೆಯಾದ ದಿನ ಆರೋಪಿ ನವೀನ್ ಕೂಡ ಮಹಿಳೆ ಮನೆಗೆ ಬಂದಿದ್ದ. ಈ ವೇಳೆ ಅತಿಯಾಗಿ ಸೆಕ್ಸ್‌ಗೆ ಮಹಿಳೆ ಒತ್ತಾಯಿಸುತ್ತಿದ್ದರಂತೆ. ಇದ್ರಿಂದ ಬೇಸರಗೊಂಡ ಆರೋಪಿ ನವೀನ್‌ ಮಹಿಳೆಯ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನ ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಮರ್ಡರ್; ಬೆಂಗಳೂರಲ್ಲಿ ಒಂಟಿ ಮಹಿಳೆ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್‌!

https://newsfirstlive.com/wp-content/uploads/2024/04/Bangalore-Woman-Death.jpg

Load More