/newsfirstlive-kannada/media/post_attachments/wp-content/uploads/2024/06/valmiki-case.jpg)
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟಿ, ಕೋಟಿ ಹಗರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ವಿವಿಧ ಕಂಪೆನಿ ಹೆಸರಿನಲ್ಲಿ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿಯನ್ನು SIT ಬಂಧಿಸಿದೆ. ಅಷ್ಟೇ ಅಲ್ಲ ಆರೋಪಿಯಿಂದ 16 ಕೆಜಿ ಚಿನ್ನ, ಬರೋಬ್ಬರಿ 10 ಕೋಟಿ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.
18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು. ಅಕೌಂಟ್ ನಂಬರ್ ಪರಿಶೀಲನೆ ವೇಳೆ 18 ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಈ ಮಾಹಿತಿಯ ಹಿನ್ನೆಲೆಯಲ್ಲಿ ನಕಲಿ ಖಾತೆ ತೆರೆದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಅಂತಿಮವಾಗಿ SIT ತನಿಖಾಧಿಕಾರಿಗಳು ಹೈದರಾಬಾದ್‌ನಲ್ಲಿ ಆರೋಪಿ ಸತ್ಯನಾರಾಯಣ ವರ್ಮಾ ಎಂಬುವವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್‌ಗೆ ಬಿಗ್ ಶಾಕ್.. SIT ವಿಚಾರಣೆ; ಕಾರಣವೇನು?
ಸತ್ಯನಾರಾಯಣ ವರ್ಮಾ ಎಂಬುವವರು ವಿವಿಧ ಕಂಪನಿ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಸತ್ಯನಾರಾಯಣನಿಂದ 16 ಕೆಜಿ ಚಿನ್ನ, 10 ಕೋಟಿ ನಗದು SIT ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಂದು ಸತ್ಯನಾರಾಯಣನನ್ನು ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ