ಪೊಲೀಸ್ ಠಾಣೆ ಮೆಟ್ಟಿಲೇರಿದ ಅಪ್ರಾಪ್ತ ಬಾಲಕಿ
ಪೋಕ್ಸೋ ಹಾಗೂ ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು
ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಯುವಕ ಪರಾರಿ
ಚಿಕ್ಕಬಳ್ಳಾಪುರ: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ನಡೆದಿದೆ. ಸುರೇಶ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಅಪ್ರಾಪ್ತ ಆರೋಪಿಸಿದ್ದಾಳೆ. ಈ ಸಂಬಂಧ ಆರೋಪಿ ಸುರೇಶ್ ವಿರುದ್ದ ಸಂತ್ರಸ್ತೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.
ಸಂತ್ರಸ್ಥೆ ಬಾಲಕಿಯನ್ನು ಚಿಕ್ಕಬಳ್ಳಾಪುರದ ಸಾಂತ್ವಾನ ಕೇಂದ್ರಕ್ಕೆ ದಾಖಲಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಹಾಗೂ ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಯುವಕ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನ್ಯಾಯ ಕೊಡಿಸುವಂತೆ ಸಂತ್ರಸ್ತೆ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ