newsfirstkannada.com

ಪ್ರೀತಿಸಿ ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿ

Share :

Published February 17, 2024 at 10:28am

Update February 17, 2024 at 10:29am

  ಪೊಲೀಸ್​ ಠಾಣೆ ಮೆಟ್ಟಿಲೇರಿದ ಅಪ್ರಾಪ್ತ ಬಾಲಕಿ

  ಪೋಕ್ಸೋ ಹಾಗೂ ಎಸ್​ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು

  ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಯುವಕ ಪರಾರಿ

ಚಿಕ್ಕಬಳ್ಳಾಪುರ: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ನಡೆದಿದೆ. ಸುರೇಶ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಅಪ್ರಾಪ್ತ ಆರೋಪಿಸಿದ್ದಾಳೆ. ಈ ಸಂಬಂಧ ಆರೋಪಿ ಸುರೇಶ್ ವಿರುದ್ದ ಸಂತ್ರಸ್ತೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಸಂತ್ರಸ್ಥೆ ಬಾಲಕಿಯನ್ನು ಚಿಕ್ಕಬಳ್ಳಾಪುರದ ಸಾಂತ್ವಾನ ಕೇಂದ್ರಕ್ಕೆ ದಾಖಲಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಹಾಗೂ ಎಸ್​ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಯುವಕ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನ್ಯಾಯ ಕೊಡಿಸುವಂತೆ ಸಂತ್ರಸ್ತೆ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಒತ್ತಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರೀತಿಸಿ ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿ

https://newsfirstlive.com/wp-content/uploads/2024/02/Suresh.jpg

Load More