ಕಾರಿನಲ್ಲಿ ಲೈಂಗಿಕ ದೌರ್ಜನ್ಯ.. ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ; ಪೊಲೀಸರಿಂದ ಹುಡುಕಾಟ

author-image
admin
Updated On
ಕಾರಿನಲ್ಲಿ ಲೈಂಗಿಕ ದೌರ್ಜನ್ಯ.. ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ; ಪೊಲೀಸರಿಂದ ಹುಡುಕಾಟ
Advertisment
  • ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ಅತ್ಯಾಚಾರ
  • ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಆರೋಪಿ
  • ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿಗೆ ಬಲೆ ಬೀಸಿರುವ ಪೊಲೀಸರು

ಉಡುಪಿ: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

25 ವರ್ಷದ ಶ್ರೇಯಸ್ ನಾಯ್ಕ ಎಂಬ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್‌ ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ:ವೀಕೆಂಡ್‌​ನಲ್ಲಿ​ ಮೋಜು-ಮಸ್ತಿ ಮಾಡಲು ಹೋಗಿದ್ದ ಇಬ್ಬರು ಬಾಲಕಿಯರು ದಾರುಣ ಸಾವು; ಆಗಿದ್ದೇನು? 

ಆರೋಪಿಯು ಬಾಲಕಿಯನ್ನು ಹಾಲಾಡಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ. ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್‌ಟಾಪ್‌ಗೆ ಪಾಸ್‌ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment