newsfirstkannada.com

ವಿಶ್ವಕಪ್‌ ಪಾಕಿಸ್ತಾನದ ಪಂದ್ಯದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಎಂಟ್ರಿ ಇಲ್ವಾ?; ಚೆನ್ನೈ ಕ್ರೀಡಾಂಗಣದಲ್ಲಿ ಆಗಿದ್ದೇನು?

Share :

24-10-2023

    ಚಿದಂಬರಂ ಸ್ಟೇಡಿಯಂನಲ್ಲಿ ಪಾಕ್‌, ಅಫ್ಘಾನಿಸ್ತಾನ ವಿಶ್ವಕಪ್‌ ಪಂದ್ಯ

    ತ್ರಿವರ್ಣ ಧ್ವಜವನ್ನು ಕಿತ್ತುಕೊಂಡು ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದಾರಾ?

    ಡಿಎಂಕೆ ಪಕ್ಷ ಕ್ಷಮೆ ಕೇಳಲು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆಗ್ರಹ

ಚೆನ್ನೈ: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ವೇಳೆ ನಡೆದ ಒಂದು ಘಟನೆ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಪಾಕಿಸ್ತಾನದ ಪಂದ್ಯ ನಡೆಯುವಾಗ ಭಾರತದ ತ್ರಿವರ್ಣ ಧ್ವಜಕ್ಕೆ ಅಡ್ಡಿ ಪಡಿಸಲಾಗಿದ್ದು, ಪೊಲೀಸರು ನಡೆದುಕೊಂಡ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ತ್ರಿವರ್ಣ ಧ್ವಜವನ್ನು ವಶಕ್ಕೆ ಪಡೆದ ಪೊಲೀಸ್ ಸಿಬ್ಬಂದಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಘಟನೆ ರಾಜಕೀಯ ಜಿದ್ದಾಜಿದ್ದಿಗೂ ಕಾರಣವಾಗಿದೆ.

ಇದನ್ನೂ ಓದಿ: ಚೆನ್ನೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಧೋನಿ.. ಮಾಹಿ ಯಾರನ್ನ ಭೇಟಿ ಮಾಡಿದ್ರು? ಮುಂದಿನ IPL​ ಆಡಲ್ವಾ?

ನಿನ್ನೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ವಿಶ್ವಕಪ್‌ ಪಂದ್ಯ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ, ಅಭಿಮಾನಿಗಳು ಕ್ರೀಡಾಂಗಣಕ್ಕೆ ಭಾರತದ ತ್ರಿವರ್ಣ ಧ್ವಜವನ್ನ ತೆಗೆದುಕೊಂಡು ಹೋಗುವುದಕ್ಕೆ ಅಡ್ಡಿಪಡಿಸಿದ್ದಾರೆ. ತ್ರಿವರ್ಣ ಧ್ವಜವನ್ನು ಕಿತ್ತುಕೊಂಡು ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದಾರೆ ಎನ್ನಲಾಗಿದೆ. ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿರುವ ಕ್ರಿಕೆಟ್‌ ಅಭಿಮಾನಿಗಳು ತರಾಟೆ ತೆಗೆದುಕೊಂಡಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ತ್ರಿವರ್ಣಧ್ವಜವನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿದ್ದಾರೆ.

ಚೆನ್ನೈ ಕ್ರೀಡಾಂಗಣದ ಬಳಿ ನಡೆದಿರುವ ಈ ಘಟನೆ ರಾಷ್ಟ್ರಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಉದ್ದೇಶಪೂರ್ವಕವಾಗಿಯೇ ತ್ರಿವರ್ಣಧ್ವಜಕ್ಕೆ ಅಡ್ಡಿಪಡಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ್ದಕ್ಕೆ ಡಿಎಂಕೆ ಪಕ್ಷ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಡಿಎಂಕೆ ಪಕ್ಷದ ನಾಯಕರಿಗೆ ಜೈಶ್ರೀರಾಮ್ ಎಂದರೂ ಸಹಿಸಿಕೊಳ್ಳಲು ಆಗಲ್ಲ. ಈಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿರೋದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊನೆಗೆ ತ್ರಿವರ್ಣಧ್ವಜಕ್ಕೆ ಅಡ್ಡಿಪಡಿಸಿದ ವಿವಾದಕ್ಕೆ ತಮಿಳುನಾಡು ಪೊಲೀಸರು ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಆ ಸಂದರ್ಭದಲ್ಲಿ ಕರ್ತವ್ಯ ನಿರತ ಸಬ್‌ ಇನ್ಸ್‌ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ಬಳಿಕ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಶ್ವಕಪ್‌ ಪಾಕಿಸ್ತಾನದ ಪಂದ್ಯದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಎಂಟ್ರಿ ಇಲ್ವಾ?; ಚೆನ್ನೈ ಕ್ರೀಡಾಂಗಣದಲ್ಲಿ ಆಗಿದ್ದೇನು?

https://newsfirstlive.com/wp-content/uploads/2023/10/Chennai-Stadium-Flag.jpg

Load More