PHOTO: ಬೆಂಗಳೂರಿಗೆ ಬಂದ ಪವನ್ ಕಲ್ಯಾಣ್ ವಾಹನದಲ್ಲಿ ಹೆಬ್ಬಾವು ಪ್ರತ್ಯಕ್ಷ; ಆಮೇಲೇನಾಯ್ತು?

author-image
admin
Updated On
PHOTO: ಬೆಂಗಳೂರಿಗೆ ಬಂದ ಪವನ್ ಕಲ್ಯಾಣ್ ವಾಹನದಲ್ಲಿ ಹೆಬ್ಬಾವು ಪ್ರತ್ಯಕ್ಷ; ಆಮೇಲೇನಾಯ್ತು?
Advertisment
  • ಆಂಧ್ರಪ್ರದೇಶ ಡಿಸಿಎಂ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್
  • ಇಂದು ಎರಡು ರಾಜ್ಯದ ಅರಣ್ಯ ಸಚಿವರ ಜೊತೆ ಮಹತ್ವದ ಮಾತುಕತೆ
  • ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್!

ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಅರಣ್ಯ ಸಚಿವರೂ ಆಗಿರುವ ಪವನ್ ಕಲ್ಯಾಣ್ ಅವರು ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿ ಹಲವರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಎರಡೂ ಸರ್ಕಾರದ ಮಾತುಕತೆ ಬಳಿಕ ಪವನ್ ಕಲ್ಯಾಣ್ ಅವರು ಕನ್ನಡ ನಾಡು, ನುಡಿ, ರಾಷ್ಟ್ರಕವಿ ಕುವೆಂಪು, ಡಾ.ರಾಜ್‌ ಕುಮಾರ್ ಅಭಿನಯದ ಗಂಧದ ಗುಡಿ ಸಿನಿಮಾವನ್ನು ಹಾಡಿ ಹೊಗಳಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪು ಕವನ ಹಾಡಿ, ಕನ್ನಡಿಗರನ್ನು ಕೊಂಡಾಡಿದ ಆಂಧ್ರ DCM ಪವನ್ ಕಲ್ಯಾಣ್; ಹೇಳಿದ್ದೇನು?

ಕರ್ನಾಟಕ ಸರ್ಕಾರದ ಜೊತೆ ಚರ್ಚೆ ನಡೆಸಲು ಆಗಮಿಸಿದ್ದ ಆಂಧ್ರಪ್ರದೇಶ ಅರಣ್ಯ ಸಚಿವ ಪವನ್ ಕಲ್ಯಾಣ್ ಬೆಂಗಾವಲು ವಾಹನದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ.

publive-image

ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಮಹತ್ವದ ಸಭೆ ನಡೆಸಿದರು. ಆನೆಗಳ ಸೆರೆ ಕಾರ್ಯಾಚರಣೆ ಮತ್ತು ಪಳಗಿಸುವ ಕ್ರಮ, ಮಾವುತರಿಗೆ ತರಬೇತಿ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆಯನ್ನು ನಡೆಸಿದ್ದಾರೆ.

publive-image

ಸಚಿವ ಈಶ್ವರ್ ಖಂಡ್ರೆ ಜೊತೆ ಸಭೆ ನಡೆಸಿದ ಬಳಿಕ ಪವನ್ ಕಲ್ಯಾಣ್ ಅವರು ಅರಣ್ಯ ಇಲಾಖೆಗೆ ಭೇಟಿ ನೀಡಿದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಅಣ್ಣಾವ್ರ ಗಂಧದ ಗುಡಿ ಹೆಸರು ಹೇಳಿ ಅಲ್ಲು ಅರ್ಜುನ್​ ಪುಷ್ಪಗೆ ಕೌಂಟರ್​ ಕೊಟ್ಟ ಪವನ್​ ಕಲ್ಯಾಣ್​​.. ಏನಂದ್ರು?​ 

publive-image

ಪವನ್ ಕಲ್ಯಾಣ್‌ ಬೆಂಗಾವಲು ವಾಹನದಲ್ಲಿ ಹೆಬ್ಬಾವು ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಅಲರ್ಟ್‌ ಆದರು. ಹರಸಾಹಸ ಪಟ್ಟು ಹೆಬ್ಬಾವನ್ನು ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment