/newsfirstlive-kannada/media/post_attachments/wp-content/uploads/2025/07/RMG-ACCIDENT-2.jpg)
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ:ವಿಶ್ವಕ್ಕೆ ದೊಡ್ಡ ಮೆಸೇಜ್ ಕೊಡಲಿದೆ ಭಾರತ.. ಶೀಘ್ರದಲ್ಲೇ ಹೈಪರ್ಸಾನಿಕ್ ಮಿಸೈಲ್ ವಿಷ್ಣುವಿನ ಪರೀಕ್ಷೆ!
ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್ ತಡೆಗೋಡೆಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಅನಾಹುತವಾಗಿದೆ. ಸ್ವಿಫ್ಟ್ ಕಾರು ಮೈಸೂರಿನಿಂದ ಬೆಂಗಳೂರು ಕಡೆ ಹೋಗ್ತಿತ್ತು. ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮೂಲದವರು. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗುದ್ದಿದ ರಭಸಕ್ಕೆ ಸಂಪೂರ್ಣ ಕಾರು ನುಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ ತಡೆಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪವರ್ ಶೇರಿಂಗ್ ಫೈಟ್ನಲ್ಲಿ ಭಾರೀ ಟ್ವಿಸ್ಟ್.. 2 ದಿನ ಸೈಲೆಂಟ್ ಆಗಿದ್ದ ಡಿಕೆಶಿ ದಿಢೀರ್ ದೆಹಲಿಗೆ ದೌಡು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ