newsfirstkannada.com

ಬಸ್ಸಿಗಾಗಿ ಕಾಯುತ್ತಾ ನಿಂತಿದ್ದವರಿಗೆ ಲಾರಿ ಡಿಕ್ಕಿ; ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Share :

Published January 16, 2024 at 12:07pm

Update January 16, 2024 at 2:36pm

  ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಲಾರಿ

  ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದ ವಿದ್ಯಾರ್ಥಿನಿ

  ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಅಪಘಾತ

ಚಿತ್ರದುರ್ಗ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದಿದ್ದಾಳೆ. ವಿಜಾಪುರ ಗೊಲ್ಲರಹಟ್ಟಿ ಗ್ರಾಮದ 19 ವರ್ಷದ ಸುಚಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ. ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗಲು 3 ಜನ ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಭಯಾನಕವಾಗಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಹಬ್ಬ ಮುಗಿಸಿ ಬರ್ತಿದ್ದಾಗ ಭಯಾನಕ ಆಕ್ಸಿಡೆಂಟ್​.. ತಂದೆ, 4 ವರ್ಷದ ಮಗಳು ಸ್ಥಳದಲ್ಲೇ ಸಾವು, ತಾಯಿ ಗಂಭೀರ

ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಭರಮಸಾಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಸ್ಸಿಗಾಗಿ ಕಾಯುತ್ತಾ ನಿಂತಿದ್ದವರಿಗೆ ಲಾರಿ ಡಿಕ್ಕಿ; ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/01/Chitradurga-Accident-3.jpg

Load More