newsfirstkannada.com

ಕಾರು, ಬೈಕ್‌ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Share :

Published May 3, 2024 at 5:03pm

Update May 3, 2024 at 5:06pm

  ಕಾರಿನಲ್ಲಿದ್ದವರು ರಾಯಚೂರು ಜಿಲ್ಲೆ ಸಿಂಧನೂರಿಗೆ ಹೊರಟಿದ್ದರು

  ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣ ಸಾವು

  ಕಾರು ಮತ್ತು ಬೈಕ್ ಅಪಘಾತದಲ್ಲಿ ಇಬ್ಬರ ಸಾವು, ಐವರಿಗೆ ಗಾಯ

ಕೊಪ್ಪಳ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರೋ ದಾರುಣ ಘಟನೆ ಗಂಗಾವತಿ ತಾಲೂಕಿನ ಸಾಣಾಪುರ ಬಳಿ ನಡೆದಿದೆ. ಗಂಗಾವತಿ ರಸ್ತೆಯ ಐಲಾಂಡ್ ವೈಬ್ಸ್ ರೆಸಾರ್ಟ್ ಬಳಿ ಘಟನೆ ಸಂಭವಿಸಿದೆ.

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರು ಕೊಪ್ಪಳ ಜಿಲ್ಲೆ ಸಿಂಧನೂರಿಗೆ ಹೊರಟಿದ್ದರು. ಈ ವೇಳೆ ಕಾರು ಬೈಕ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಸಿಂಧನೂರು ಮೂಲದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಕೊಪ್ಪಳ ತಾಲೂಕಿನ ಕುಟುಗನಳ್ಳಿ ಗ್ರಾಮದವನು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಂದಕಕ್ಕೆ ಉರುಳಿ ಬಿದ್ದ ಬಸ್​.. ಅನ್ಯಾಯವಾಗಿ ಪ್ರಾಣ ಚೆಲ್ಲಿದ 20 ಮಂದಿ 

ಕಾರು, ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಮೇಲೆ ಗಂಗಾವತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಗಂಗಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರು, ಬೈಕ್‌ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/05/Raichur-Accident.jpg

Load More