newsfirstkannada.com

×

ಹಾಸನದಲ್ಲಿ ಭೀಕರ ರಸ್ತೆ ಅಪಘಾತ; ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕ್ಯಾಂಟರ್; ತಾಯಿ, ಮಗ ಸ್ಥಳದಲ್ಲೇ ಸಾವು

Share :

Published November 21, 2023 at 2:57pm

    ತಾಯಿ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಸಾವನ್ನಪ್ಪಿದ ಮಗ

    ಹಾಸನ ನಗರದ ಸ್ಥಳದಲ್ಲಿ ಬಿ.ಕಾಟೀಹಳ್ಳಿಯಲ್ಲಿ ಬಿಗುವಿನ ವಾತಾವರಣ

    ಅಪಘಾತ ಸಂಭವಿಸಿದ ನಂತರ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿ

ಹಾಸನ ನಗರದ ಬಿ. ಕಾಟೀಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ ಹೊಡೆದಿದ್ದು, ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸತೀಶ್ (42), ಕಮಲಮ್ಮ (71) ಮೃತ ದುರ್ದೈವಿಗಳು.

ವಕೀಲನಾಗಿರುವ ಮೃತ ಸತೀಶ್, ತನ್ನ ತಾಯಿ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದ್ದು, ಇಬ್ಬರೂ ರಸ್ತೆ ಪಕ್ಕಕ್ಕೆ ಬಿದ್ದು ಪ್ರಾಣ ಬಿಟ್ಟಿದ್ದಾರೆ.

ಅಪಘಾತ ಸಂಭವಿಸಿದ ನಂತರ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಾಸನ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಟ್ರಾಫಿಕ್ ಜಾಮ್‌ ಆಗಿದ್ದ ರಸ್ತೆಯಲ್ಲಿ ವಾಹನಗಳ ತೆರವಿಗೆ ಹರಸಾಹಸ ಪಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನದಲ್ಲಿ ಭೀಕರ ರಸ್ತೆ ಅಪಘಾತ; ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕ್ಯಾಂಟರ್; ತಾಯಿ, ಮಗ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/11/Hassan-Accident.jpg

Load More