ಮದುವೆ ಸಮಾರಂಭಕ್ಕೆ ಹೋಗಿ ವಾಪಸ್ ಬರುವಾಗ ಭೀಕರ ದುರಂತ
ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ವಾಹನಕ್ಕೆ ಗುದ್ದಿದ ಕಾರು ನಜ್ಜುಗುಜ್ಜು
ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ
ಚೆನ್ನೈ: ಕಾರು ಹಾಗೂ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರೋ ದಾರುಣ ಘಟನೆ ತಮಿಳುನಾಡಿನ ಧಾರಾಪುರಂ ಬಳಿ ನಡೆದಿದೆ. ಟ್ಯಾಂಕರ್ ಟ್ರಕ್ ವಾಹನ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮದುವೆ ಸಮಾರಂಭ ಮುಗಿಸಿಕೊಂಡು ಕಾರಿನಲ್ಲಿ ವಾಪಸ್ ಆಗುತ್ತಿದ್ದವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತ್ರಿಪುರ ಜಿಲ್ಲೆಯ ಧಾರಾಪುರಂನ ಮನಕಾಡು ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ವಾಹನ ಕೊಯಮತ್ತೂರಿನ ಇರುಗೂರು ಕಡೆ ಸಾಗುತಿತ್ತು. ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಟ್ರಕ್ ವಾಹನಕ್ಕೆ ಕಾರು ಗುದ್ದಿದ್ದು, ತಮಿಳ್ಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.
ಕಾರಿನಲ್ಲಿದ್ದವರೆಲ್ಲರೂ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮದುವೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ