ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿಯ ಆ್ಯಕ್ಸಲ್ ಕಟ್
ನಾಲ್ಕು ಪಾದಚಾರಿಗಳ ಮೇಲೆ ಟ್ರ್ಯಾಕ್ಟರ್ ಪಲ್ಟಿ
ಮೂವರು ಸಾವು, ಮತ್ತೋರ್ವ ಮಹಿಳೆ ಗಂಭೀರ
ಬೆಳಗಾವಿ: ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿಯ ಆ್ಯಕ್ಸಲ್ ಕಟ್ ಆದ ಪರಿಣಾಮ ಟ್ರ್ಯಾಲಿ ಪಲ್ಟಿಯಾಗಿದೆ.
ಶೇಡಬಾಳ ಗ್ರಾಮದಿಂದ ಕೆಲಸಕ್ಕೆಂದು ಹೊರಟಿದ್ದ ನಾಲ್ಕು ಪಾದಚಾರಿಗಳ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು ಪಕ್ಕದ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮಿರಜ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ವೀರಕುಮಾರ ಪಾಟೀಲ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ, ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಪಘಾತ ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ