/newsfirstlive-kannada/media/post_attachments/wp-content/uploads/2024/09/TRAIN_MP.jpg)
ಭೋಪಾಲ್: ಇಂದು ಬೆಳ್ಳಂಬೆಳಗ್ಗೆ ರೈಲಿನ 2 ಬೋಗಿಗಳು ಹಳಿ ತಪ್ಪಿದ್ದು ದೊಡ್ಡ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಗಣಪತಿಗೆ 20 ಕೆ.ಜಿ ಬಂಗಾರದ ಕಿರೀಟ ದಾನ.. ಅನಂತ್ ಅಂಬಾನಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂಪಾಯಿ?
ಬೆಳಗ್ಗೆ 5:50ರ ಸುಮಾರಿಗೆ ಇಂದೋರ್ ಟು ಜಬಲ್‌ಪುರ ಎಕ್ಸ್‌ಪ್ರೆಸ್ ರೈಲು ತೆರಳುತ್ತಿರುವಾಗ ಜಬಲ್‌ಪುರ ರೈಲು ನಿಲ್ದಾಣ ಇನ್ನು ಸ್ವಲ್ಪ ದೂರ ಇರುವಾಗಲೇ ಎರಡು ಬೋಗಿಗಳು ಹಳಿ ತಪ್ಪಿವೆ. ಈ ವೇಳೆ ರೈಲಿನ ಹಳಿಗಳು ಪಲ್ಟಿಯಾಗುವುದನ್ನು ತಪ್ಪಿಸಲಾಗಿದ್ದು ಭಾರೀ ಅವಘಡವನ್ನು ಮೊದಲೇ ತಡೆದಂತೆ ಆಗಿದೆ. ಹೀಗಾಗಿ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ದೇಶದ ಅತಿದೊಡ್ಡ ಗಣೇಶನ ವಿಗ್ರಹ.. ಎಷ್ಟು ಅಡಿ, ಎಷ್ಟು ಟನ್ ಇದೆ, ಇದರ ವಿಶೇಷತೆ ಏನು?
ಪ್ಲಾಟ್ ಫಾರ್ಮ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈಲಿನ ವೇಗ ಕಡಿಮೆ ಇದ್ದ ಕಾರಣ ದೊಡ್ಡ ಅವಘಡ ಸಂಭವಿಸಲಿಲ್ಲ. ನಿಲ್ದಾಣದಿಂದ ಸುಮಾರು 150 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ಬೋಗಿಗಳು ಮಾತ್ರ ಹಳಿ ತಪ್ಪಿದ್ದು ಅದನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ರೈಲು ಸಂಚಾರ ಮತ್ತೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ