/newsfirstlive-kannada/media/post_attachments/wp-content/uploads/2023/06/Tractor.jpg)
ಆನೇಕಲ್: ವಾಟರ್ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿಯಾಗಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಿ ಕೆ ಪಾಳ್ಯದಲ್ಲಿ ನಡೆದಿದೆ. ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಬಾಲಕ ಭುವನ್ ಸಾವನ್ನಪ್ಪಿದ್ರೆ, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 ವರ್ಷದ ಭುವನ್ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್‌ಕ್ರೀಮ್ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ವಾಟರ್ ಟ್ಯಾಂಕರ್ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದ ಎನ್ನಲಾಗಿದೆ. ಅಪಘಾತದ ಬಳಿಕ ಕಿರಾತಕ ಚಾಲಕ ವಾಟರ್ ಟ್ಯಾಂಕರ್ ಬಿಟ್ಟು ಪರಾರಿಯಾಗಿದ್ದಾನೆ.
ಬಾಲಕನನ್ನು ಬಲಿ ಪಡೆದ ಟ್ರ್ಯಾಕ್ಟರ್‌ನ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಅಪಘಾತದ ನಿಜಕ್ಕೂ ಭಯಾನಕವಾಗಿದ್ದು, ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸಮೀಪ ವಾಟರ್ ಟ್ಯಾಂಕರ್‌ಗಳ ಹಾವಳಿ ಮಿತಿ ಮೀರಿದ್ದು, ಬಹಳಷ್ಟು ದೂರುಗಳು ಕೇಳಿ ಬಂದಿವೆ.
ವಾಟರ್ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಿ.ಕೆ ಪಾಳ್ಯದಲ್ಲಿ ನಡೆದಿದೆ. ಟ್ಯಾಂಕರ್ 4 ವರ್ಷದ ಬಾಲಕನ ಮೇಲೆ ಹರಿದು ಹೋದ ಭೀಕರ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. #Newsfirstlive#Accident#Bangalore#Anekal#Childdeath#KannadaNews#CCTVpic.twitter.com/qccMLQZku6
— NewsFirst Kannada (@NewsFirstKan) June 7, 2023