ಪ್ರಿಯಕರನ ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಕೊಂದ ಪ್ರಿಯತಮೆ.. ಅಸಲಿ ಕಾರಣವೇನು?

author-image
Bheemappa
Updated On
ಪ್ರಿಯಕರನ ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಕೊಂದ ಪ್ರಿಯತಮೆ.. ಅಸಲಿ ಕಾರಣವೇನು? 
Advertisment
  • ಒಂದು ತಿಂಗಳ ಹಿಂದೆ ಪ್ರಿಯತಮೆಯ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದ
  • ಮಾತನಾಡಬೇಕೆಂದು ಮನೆಗೆ ಪ್ರಿಯಕರನನ್ನ ಕರೆಯಿಸಿಕೊಂಡಿದ್ದ ಪ್ರೇಮಾ
  • ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪಟ್ಟಣ ಪೊಲೀಸ್ರು

ಮೈಸೂರು: ಖಾಸಗಿ ಫೋಟೋಗಳನ್ನು ವೈರಲ್ ಮಾಡುವ ಬೆದರಿಕೆ ಹಾಕುತ್ತಿದ್ದ ಪ್ರಿಯಕರನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ​ ಪ್ರಿಯತಮೆ ತನ್ನ ಸಹೋದರ ಜೊತೆಗೂಡಿ ಕೊಲೆ ಮಾಡಿದ್ದಾಳೆ. ನಂಜನಗೂಡು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್.ಡಿ ಕೋಟೆ ತಾಲೂಕಿನ ಸಿದ್ದಯ್ಯನಹುಂಡಿ ಗ್ರಾಮದ ರಾಜೇಶ್ (32) ಕೊಲೆಯಾದ ವ್ಯಕ್ತಿ. ಪ್ರೇಮಾ, ಈಕೆಯ ಸಹೋದರ ಶಿವು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇವರು ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದಾರೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತೊಟ್ಟಿಲಲ್ಲಿ ಹಾಕಿದ್ದ ಕೈ ಮಣ್ಣಲ್ಲಿಯೂ ಹಾಕ್ತಿದೆ ಎಂದ ಹೆತ್ತ ತಾಯಿ.. ಕರುಳು ಹಿಂಡುವ ಕ್ಷಣಗಳ ಕಂಡು ಕಣ್ಣೀರಿಟ್ಟ ಜನ..

publive-image

15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುದ ನಿವಾಸಿಯನ್ನು ಪ್ರೇಮಾ ಮದುವೆಯಾಗಿದ್ದಳು. ಗಂಡನ ಸ್ನೇಹಿತನಾಗಿದ್ದ ರಾಜೇಶ್ ಆಗಾಗ ಮನೆಗೆ ಬರುತ್ತಿದ್ದ. ಹೀಗಾಗಿ ಅವನ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಪ್ರೇಮಾ ಜೊತೆಗೂಡಿದ್ದರು. ಒಂದು ತಿಂಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇಬ್ಬರು ಖಾಸಗಿಯಾಗಿದ್ದ ಫೋಟೋ, ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಕ್ಕೆ ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಮಾಡ್ತಿದ್ದ ಮೆಸೇಜ್ ಏನಾಗಿತ್ತು..? ಪವಿತ್ರಗೌಡ ತನಿಖೆಗೆ ಟ್ವಿಸ್ಟ್ ಕೊಡಲು ಮುಂದಾದ ಪೊಲೀಸ್..!

ಹೀಗಾಗಿ ನಿನ್ನ ಜೊತೆ ಮಾತನಾಡಬೇಕು ಎಂದು ರಾಜೇಶ್​ನನ್ನು ಮನೆಗೆ ಕರೆಯಿಸಿಕೊಂಡಿದ್ದಳು. ಇದೇ ವೇಳೆ ಸಹೋದರನ ಜೊತೆ ಸೇರಿ ವ್ಯಕ್ತಿ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಂದಿದ್ದಾರೆ. ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment