/newsfirstlive-kannada/media/post_attachments/wp-content/uploads/2025/01/HSN-KNIFE-STAB.jpg)
ಪ್ರೀತಿಸಿದ ಪ್ರಿಯಕರನನ್ನೇ ಪ್ರೇಯಿಸಿ ಚಾಕುವಿನಿಂದ ಇರಿದ ಘಟನೆ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ನಡೆದಿದ್ದು. ಪ್ರಿಯಕರ 25 ವರ್ಷದ ಮನುಕುಮಾರ್ ಎಂಬುವವರ ಸ್ಥಿತಿ ಗಂಭೀರವಾಗಿದೆ
ಹಾಸನದ ತಾಳೂಕಿನ ಎ ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಮತ್ತು ಭವಾನಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಮನಸ್ತಾಪ ಬಂದು ದೂರವಾಗಿದ್ದರು. ನಿನ್ನೆ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಖಾಸಗಿ ಹೋಟೆಲ್​ಗೆ ಮನುಕುಮಾರ್ ಬಂದಿದ್ದರು. ಪಾರ್ಟಿ ವೇಳೆ ಭವಾನಿ ಪದೇ ಪದೇ ಫೋನ್ ಮಾಡುತ್ತಿದ್ದಳು. ತಡರಾತ್ರಿ 12.30ಕ್ಕೆ ಹೋಟೆಲ್ ಬಳಿ ಭವಾನಿ ಬಂದಿದ್ದಾಳೆ.
ಇದನ್ನೂ ಓದಿ:ಕ್ಯಾನ್ಸರ್ ಗೆದ್ದ ಶಿವಣ್ಣ.. ಅಮೆರಿಕದಿಂದಲೇ I will back ಎಂದ ಸೆಂಚುರಿ ಸ್ಟಾರ್​
ಅಲ್ಲೆಬಿದ್ದಿದ್ದ ಪಾಸ್​ನ್ನು ಕೊರಳಿಗೆ ಹಾಕಿಕೊಂಡು ಗೇಟ್ ಒಳಗೆ ಹೋಗಿದ್ದಾಳೆ ಭವಾನಿ. ಅಷ್ಟರಲ್ಲಿ ಗೇಟ್ ಹತ್ತಿರ ಬಂದಿದ್ದಾನೆ ಮನುಕುಮಾರ್. ಈ ವೇಳೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ಬಿಡಿಸಲು ಅಂತ ಮನುಕುಮಾರ್ ಗೆಳೆಯರು ಬಂದಿದ್ದಾರೆ. ಇದೇ ವೇಳೆ ಏಕಾಏಕಿ ಚಾಕುವಿನಿಂದ ಮನುಕುಮಾರ್​ಗೆ ಇರಿದಿದ್ದಾಳೆ ಭವಾನಿ. ಕೆ.ಆರ್​.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಮನುಕುಮಾರ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಆರೋಗ್ಯ ಸ್ಥಿತಿ ತುಂಬಾ ಗಂಭೀರವಿದೆ ಎಂದು ತಿಳಿದು ಬಂದಿದೆ. ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us