/newsfirstlive-kannada/media/post_attachments/wp-content/uploads/2024/05/KLR_BOY_DIED.jpg)
ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್ಗೆ ಬೈಕ್ವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿ ಬಳಿ ನಡೆದಿದೆ.
ತಾಲೂಕಿನ ಐಪಲ್ಲಿ ಗ್ರಾಮದ ಬಾಲಾಜಿ (22) ಮೃತ ಯುವಕ. ಕೆಲಸದ ನಿಮಿತ್ತ ತೆರಳುತ್ತಿದ್ದಾಗ ರಾತ್ರಿ ಮಳೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ಗೆ ಬೈಕ್ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದಾಗಿ ಯುವಕನು ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ