/newsfirstlive-kannada/media/post_attachments/wp-content/uploads/2024/04/AMIR-KHAN.jpg)
ಲೋಕಸಭಾ ಚುನಾವಣೆ ವೇಳೆ ನಟ ಅಮೀರ್​ ಖಾನ್ (Aamir Khan)​ ಅವರು ಕಾಂಗ್ರೆಸ್​ ವಿರುದ್ಧ ರೊಚ್ಚಿಗೆದ್ದಿದ್ದು, ಮುಂಬೈನ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡೀಪ್​ ಫೇಕ್​ ವೀಡಿಯೋವನ್ನು ಕಾಂಗ್ರೆಸ್ ಪಕ್ಷ ​ಬಳಸಿಕೊಂಡಿದೆ ಎಂದು ಆರೋಪಿಸಿ ಕೇಸ್​ ದಾಖಲಿಸಿದ್ದಾರೆ.
ಇದನ್ನೂ ಓದಿ:ಶೀಘ್ರದಲ್ಲೇ ಆರ್​ಸಿಬಿ ಮಾಲೀಕರ ಬದಲಾವಣೆ..? ಬಿಸಿಸಿಐ ಮೇಲೆ ಹೆಚ್ಚಿದ ಭಾರೀ ಒತ್ತಡ..!
ಈ ಕುರಿತಂತೆ ನಟ ಅಮೀರ್​ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಇದೊಂದು ಫೇಕ್​ ವೀಡಿಯೋ, ಅಮೀರ್ ಖಾನ್ ಈ ಹಿಂದೆ ದೂರದರ್ಶನದಲ್ಲಿ ಸತ್ಯಮೇವ ಜಯತೇ ಎಂಬ ಕಾರ್ಯಕ್ರಮ ನಡೆಸುತ್ತಿದ್ದರು. ಆ ದೃಶ್ಯವನ್ನು ಇಟ್ಟುಕೊಂಡು, ಕಾಂಗ್ರೆಸ್​ ಬಿಜೆಪಿಯನ್ನ ಗುರಿಯಾಗಿಸಿ ಈ ಡೀಪ್ ಫೇಕ್ ವಿಡಿಯೋವನ್ನು ಹರಿ ಬಿಟ್ಟಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೀರ್​ ಖಾನ್ ಅವರ ವಕ್ತಾರ, ಮಿಸ್ಟರ್ ಅಮೀರ್ ಖಾನ್ ಅವರು ತಮ್ಮ 35 ವರ್ಷಗಳ ಸಿನಿಮಾ ಜೀವನದಲ್ಲಿ ಯಾವತ್ತೂ, ಯಾವುದೇ ರಾಜಕೀಯ ಪಕ್ಷವನ್ನು ಅನುಮೋದಿಸಿಲ್ಲ ಎಂಬುವುದನ್ನು ನಾವಿಲ್ಲಿ ಸ್ಪಷ್ಟಪಡಿಸುತ್ತೇವೆ. ಅವರು, ಚುನಾವಣಾ ಆಯೋಗ ಮತದಾನ ಜಾಗೃತಿ ಕುರಿತ ಅಭಿಯಾನಗಳಿಗೆ ಕೊಡುಗೆ ನೀಡಿದ್ದಾರೆ. ಅದು ಯಾವುದೇ ಪಕ್ಷಗಳಿಗೆ ಸೇರಿದ್ದಲ್ಲ. ಇದೀಗ ಡೀಪ್-ಫೇಕ್ ವಿಡಿಯೋ ಸೃಷ್ಟಿಸಿ ತಪ್ಪು ಸಂದೇಶ ನೀಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us