ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿಯಲ್ಲಿ ಘಟನೆ
ಕುಟುಂಸ್ಥರು ಎಲ್ಲಾ ಕಡೆ ಹುಡುಕಿದರು ಅವರ ಸುಳಿವೇ ಸಿಕ್ಕಿರಲಿಲ್ಲ
ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದಿದ್ರು
ಮೈಸೂರು: ಹೊಟ್ಟೆ ನೋವು ತಾಳಲಾರದೇ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿಯಲ್ಲಿ ನಡೆದಿದೆ. ಮಂಜುಳಾ (50) ಮೃತ ದುರ್ದೈವಿ.
ಆತ್ಮಹತ್ಯೆ ಮಾಡಿಕೊಂಡಿರೋ ಮಂಜುಳಾ ಮೈಸೂರಿನ ಸುಭಾಷ್ ನಗರದ ನಿವಾಸಿ. ನವೆಂಬರ್ 7ರಂದು ಮಂಜುಳಾ ಮನೆಯಿಂದ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಬಂದಿದ್ದರು. ಆದರೆ ಒಂದು ದಿನ ಕಳೆದರು ಮಂಜುಳಾ ಅವರು ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಸ್ಥರು ಈ ಬಗ್ಗೆ ಎಲ್ಲಾ ಕಡೆ ಹುಡುಕಿದರು ಅವರ ಸುಳಿವು ಸಿಕ್ಕಿರಲಿಲ್ಲ. ಇಂದು ಕಪಿಲಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಆಗ ಮೃತ ಮಹಿಳೆಯನ್ನು ಮಂಜುಳಾ ಎಂದು ಗುರುತಿಸಿದ್ದಾರೆ.
ಮಂಜುಳಾ ಅವರಿಗೆ ಸುಮಾರು ಹತ್ತು ವರ್ಷಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಹೊಟ್ಟೆ ನೋವು ತಾಳಲಾರದೇ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಮಂಜುನಾಥ್ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ