newsfirstkannada.com

CVoter ಅಚ್ಚರಿಯ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್, ಬಿಜೆಪಿಗೆ ಎಷ್ಟು ಕ್ಷೇತ್ರದಲ್ಲಿ ಗೆಲುವು?

Share :

Published April 15, 2024 at 9:33am

Update April 15, 2024 at 10:51am

  ಏಪ್ರಿಲ್ 19 ರಿಂದ ದೇಶದಲ್ಲಿ ಮೊದಲ ಹಂತದಲ್ಲಿ ಮತದಾನ

  ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ

  ಜೂನ್ 4 ರಂದು ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಆಗಲಿದೆ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನೇನು ನಾಲ್ಕು ದಿನಗಷ್ಟೇ ಭಾಕಿ ಇದೆ. ಈ ಮಧ್ಯೆ ಎಬಿಪಿ ನ್ಯೂಸ್ ಮತ್ತು CVoter ನಡೆಸಿದ ಒಪಿನಿಯನ್ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್​​ ಮೈತ್ರಿಕೂಟ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿಕೂಟ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಐದು ಕ್ಷೇತ್ರಗಳನ್ನು ರಾಜ್ಯದ ಆಡಳಿತರೂಢ ಕಾಂಗ್ರೆಸ್​ ಪಾಲಾಗಲಿದೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ. ಬಿಜೆಪಿ 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ, ಜೆಡಿಎಸ್​ 2 ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ:Video: ಭರ್ಜರಿ 3 ಸಿಕ್ಸರ್ ಬಾರಿಸಿ ಪೆವಿಲಿಯನ್​ಗೆ ಹೊಗುವಾಗ ಅಭಿಮಾನಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಧೋನಿ..!

ಕರ್ನಾಟಕದಲ್ಲಿ ಒಟ್ಟು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ಹಾಗೂ ಮೇ 7 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ರಾಜಸ್ಥಾನದಲ್ಲಿ ಬಿಜೆಪಿ ಕ್ಲೀನ್​ಸ್ವೀಪ್ ಮಾಡಲಿದೆ ಎಂದು ಸಮೀಕ್ಷೆ ಹೇಳಿದೆ. ಒಟ್ಟು 25 ಲೋಕ ಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದೆ. ಪಂಜಾಬ್​ನಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿದ್ರೆ, ಕಾಂಗ್ರೆಸ್ 7, ಆಮ್​ ಆದ್ಮಿ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಗೆಲುವು ಪಡೆದರೆ, ಕಾಂಗ್ರೆಸ್​ 2, ಟಿಎಂಸಿ 20 ಕ್ಷೇತ್ರಗಳಲ್ಲಿ ಗೆಲುವು ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ:ಧೋನಿ ಸಿಕ್ಸ್ ಹೊಡೆಯಲಿ ಅಂತಾ ಕೆಟ್ಟ ಬೌಲಿಂಗ್ -ಹಾರ್ದಿಕ್ ಪಾಂಡ್ಯ ಸುತ್ತ ಮತ್ತೊಂದು ವಿವಾದ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CVoter ಅಚ್ಚರಿಯ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್, ಬಿಜೆಪಿಗೆ ಎಷ್ಟು ಕ್ಷೇತ್ರದಲ್ಲಿ ಗೆಲುವು?

https://newsfirstlive.com/wp-content/uploads/2024/04/BJP-CONG-JDS.jpg

Load More