KSRTC, ಟ್ಯಾಂಕರ್ ಮಧ್ಯೆ ಅಪಘಾತ.. ಬಸ್‌ ನಜ್ಜುಗುಜ್ಜು; ಹಲವರಿಗೆ ಗಂಭೀರ ಗಾಯ

author-image
admin
Updated On
KSRTC, ಟ್ಯಾಂಕರ್ ಮಧ್ಯೆ ಅಪಘಾತ.. ಬಸ್‌ ನಜ್ಜುಗುಜ್ಜು; ಹಲವರಿಗೆ ಗಂಭೀರ ಗಾಯ
Advertisment
  • ಮೂಡಿಗೆರೆ ಬಳಿ KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿಕ್ಕಿ
  • ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜು
  • ಕಡೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: 2 ತಿಂಗಳ ಗರ್ಭಿಣಿ ಪತ್ನಿಗೆ ಚೂರಿ ಇರಿದ ನೇತ್ರಾವತಿ ಧಾರಾವಾಹಿ ನಟ.. ಗರ್ಭಪಾತವಾಗಿ ಆಸ್ಪತ್ರೆಗೆ ದಾಖಲು

publive-image

ಮೂಡಿಗೆರೆ ತಾಲೂಕಿನ ಕಡೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ಹಿಟ್​ ಆ್ಯಂಡ್​ ರನ್​; ಬೈಕ್​ಗೆ ಭಯಾನಕ ಡಿಕ್ಕಿ.. ರಸ್ತೆಯಲ್ಲೇ ಉಸಿರು ಚೆಲ್ಲಿದ ಯುವಕ 

KSRTC, ಟ್ಯಾಂಕರ್ ಅಪಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment